ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ದಾವಣಗೆರೆ ವಿಶ್ವವಿದ್ಯಾನಿಲಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಧರ್ಮಪುರ ಕೆರೆ ಮತ್ತು ಇತರೆ ಏಳು ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರಾಜ್ಯದ ರೈತರ ಅಭ್ಯುದಯಕ್ಕೋಸ್ಕರ ಅಪ್ಪರ್ ಭದ್ರಾ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಯಂತಹ ಎರಡು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಇದರಿಂದಾಗಿ ಮಧ್ಯ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಈ ಪ್ರದೇಶವನ್ನು ನೀರಾವರಿಗೊಳಪಡಿಸಿ, ಈ ಭಾಗದ ರೈತರ ಬದುಕು ಹಸನುಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.
ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾಗದ ರೈತರು ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವಂತೆ ಸುಮಾರು 563 ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದು, ಆಗ ನೀರಾವರಿ ಸಚಿವರಾಗಿದ್ದ ನಾನು ಧರಣಿ ಸ್ಥಳಕ್ಕೆ ಆಗಮಿಸಿ, ವಾಣಿವಿಲಾಸ ಸಾಗರಕ್ಕೆ 5 ಟಿ.ಎಂ.ಸಿ ನೀರು ಹರಿಸುವ ಭರವಸೆ ನೀಡಿದ್ದಲ್ಲದೆ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಒಪ್ಪಿಗೆ ಪಡೆದು, ಈ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಮೊದಲ ಬಾರಿಗೆ ಅನುದಾನ ಮೀಸಲಿಡಲಾಯಿತು ಎಂದರು.
ಈಗ ವಾಣಿವಿಲಾಸ ಸಾಗರದಿಂದ ವೇದಾವತಿ ನದಿ ಪಾತ್ರದ ಮೂಲಕ ಧರ್ಮಪುರ ಕೆರೆಗೆ ನೀರು ಹರಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಇದರಿಂದ ಈ ಭಾಗದ ಜನರ ಸುಮಾರು ನೂರು ವರ್ಷಗಳ ಬೇಡಿಕೆ ಈಡೇರಿಸುವುದರ ಜೊತೆಗೆ ಈ ಹೋಬಳಿಯ ವಿವಿಧ ಕೆರೆಗಳಿಗೆ ನೀರುಣಿಸುವ ಸುಮಾರು 90 ಕೋಟಿ ವೆಚ್ಚದ ಕಾಮಗಾರಿಗೆ ನಮ್ಮ ಬಿಜೆಪಿ ಸರ್ಕಾರ ಅನುಮೋದನೆ ನೀಡಲಾಗಿದ್ದು, ಈ ಬೇಡಿಕೆ ಈಡೇರಿಸುವಲ್ಲಿ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಪರಿಶ್ರಮ ಅಪಾರವಾದದ್ದು ಎಂದರು.
ತಾಲೂಕಿನ ಶಾಸಕಿ ಕೆ.ಪೂರ್ಣಿಮಾ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್, ರಾಜ್ಯ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ಕರ್ನಾಟಕ ರಾಜ್ಯ ಮುಖ್ಯಸಚೇತಕರಾದ ವೈ.ಎ.ನಾರಾಯಣಸ್ವಾಮಿ, ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಸಿರಾ ಶಾಸಕ ರಾಜೇಶ್ ಗೌಡ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದಗೌಡ, ಕೆ.ಎಸ್.ನವೀನ್, ಮಾಜಿ ಶಾಸಕ ಆರ್.ರಾಮಯ್ಯ, ಪ್ರವರ್ಗ-1 ರ ರಾಜ್ಯ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿಗಳಾದ ಕವಿತಾ ಮಣ್ಣಿಕೇರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪರಶುರಾಮ್, ವಿಶ್ವೇಶ್ವರಯ್ಯ ಜಲನಿಗಮದ ಮುಖ್ಯ ಇಂಜಿನಿಯರ್ ರವೀಂದ್ರ, ಅಧೀಕ್ಷಕ ಇಂಜಿನಿಯರ್ ಎಫ್.ಹೆಚ್.ಲಮಾಣಿ, ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್.ರಘುನಾಥ್, ಬಸವಾನಂದ್, ಎಂ.ಜಿ.ಗೋವಿಂದಯ್ಯ, ಡಾ.ವಿರುಪಾಕ್ಷಪ್ಪ, ಜಯರಾಜ್, ಹಾರ್ಡ್ ವೇರ್ ಶಿವಣ್ಣ, ಶ್ರವಣಗೆರೆ ಶಿವಣ್ಣ, ನೀರಾವರಿ ಹೋರಾಟ ಸಮಿತಿ ಮುಖಂಡರುಗಳಾದ ಹೆಚ್.ಆರ್.ತಿಮ್ಮಯ್ಯ, ಪ್ರಕಾಶ್ ಬಬ್ಬೂರು, ಮದ್ದಿಹಳ್ಳಿ ದೊಡ್ಡಯ್ಯ, ಗಿರಿರಾಜ್ ಸಕ್ಕರ, ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷ ವಿಶ್ವನಾಥ್, ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು , ನಗರಸಭೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಯ ಅಧಿಕಾರಿಗಳು ಮಾಹಿ ಜ್ಯುವೆಲರ್ಸ್ ಮಾಲಿಕರಾದ ಕೌಶಿಕ್ ನಾಯ್ಡು ಸೇರಿದಂತೆ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಹಿರಿಯೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5