nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026
    Facebook Twitter Instagram
    ಟ್ರೆಂಡಿಂಗ್
    • ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!
    • ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ
    • ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ
    • ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು
    • ತುಮಕೂರು: ಜಿಲ್ಲೆಯ ಗ್ರಾ.ಪಂ. ಸದಸ್ಯರ ಸಂಖ್ಯೆ 5,338ಕ್ಕೆ ನಿಗದಿ; ಗೆಜೆಟ್‌ ನಲ್ಲಿ ಕರಡು ಪಟ್ಟಿ ಪ್ರಕಟ
    • ಬೇರೆಯವರಿಗೂ ಅವಕಾಶ ಸಿಗಲಿ: ಸಚಿವ ಸಂಪುಟ ಪುನಾರಚನೆಗೆ ದಿನೇಶ್ ಗುಂಡೂರಾವ್ ಬೆಂಬಲ
    • ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ, ₹1.25 ಲಕ್ಷ ದಂಡ
    • ಭ್ರಷ್ಟಾಚಾರದಿಂದ ದೂರ ಇರಿ, ಮಧ್ಯವರ್ತಿಗಳಿಗೆ ಕಚೇರಿಯಲ್ಲಿ ಅವಕಾಶ ನೀಡಬೇಡಿ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪ್ಪರ್ ಭದ್ರಾಯೋಜನೆ, ಎತ್ತಿನಹೊಳೆ ಯೋಜನೆಯಿಂದ ರೈತರ ಬದುಕು ಹಸನು: ಸಿಎಂ ಬೊಮ್ಮಾಯಿ
    Uncategorized June 5, 2022

    ಅಪ್ಪರ್ ಭದ್ರಾಯೋಜನೆ, ಎತ್ತಿನಹೊಳೆ ಯೋಜನೆಯಿಂದ ರೈತರ ಬದುಕು ಹಸನು: ಸಿಎಂ ಬೊಮ್ಮಾಯಿ

    By adminJune 5, 2022No Comments2 Mins Read
    cm bommai

    ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹರಿಯಬ್ಬೆ ಗ್ರಾಮದ ದಾವಣಗೆರೆ ವಿಶ್ವವಿದ್ಯಾನಿಲಯದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಧರ್ಮಪುರ ಕೆರೆ ಮತ್ತು ಇತರೆ ಏಳು ಕೆರೆಗಳಿಗೆ ವೇದಾವತಿ ನದಿಯಿಂದ ಏತ ನೀರಾವರಿ ಮೂಲಕ ನೀರನ್ನು ಕೆರೆಗಳಿಗೆ ತುಂಬಿಸುವ ಕಾಮಗಾರಿ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ‌ ಭಾಗವಹಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಈ ರಾಜ್ಯದ ರೈತರ ಅಭ್ಯುದಯಕ್ಕೋಸ್ಕರ ಅಪ್ಪರ್ ಭದ್ರಾ ಯೋಜನೆ ಹಾಗೂ ಎತ್ತಿನಹೊಳೆ ಯೋಜನೆಯಂತಹ ಎರಡು ಮಹತ್ವದ ಯೋಜನೆಗಳನ್ನು ಕೈಗೆತ್ತಿಕೊಂಡಿದ್ದು, ಇದರಿಂದಾಗಿ ಮಧ್ಯ ಕರ್ನಾಟಕದ ಜನರ ಬಹುದಿನಗಳ ಬೇಡಿಕೆ ಈಡೇರಿಸುವ ಮೂಲಕ ಈ ಪ್ರದೇಶವನ್ನು ನೀರಾವರಿಗೊಳಪಡಿಸಿ, ಈ ಭಾಗದ ರೈತರ ಬದುಕು ಹಸನುಮಾಡುವಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದರು.


    Provided by
    Provided by

    ಅಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಭಾಗದ ರೈತರು ಭದ್ರಾ ಮೇಲ್ದಂಡೆ ಯೋಜನೆ ಮೂಲಕ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವಂತೆ ಸುಮಾರು 563 ದಿನಗಳ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಿದ್ದು, ಆಗ ನೀರಾವರಿ ಸಚಿವರಾಗಿದ್ದ ನಾನು ಧರಣಿ ಸ್ಥಳಕ್ಕೆ ಆಗಮಿಸಿ, ವಾಣಿವಿಲಾಸ ಸಾಗರಕ್ಕೆ 5 ಟಿ.ಎಂ.ಸಿ ನೀರು ಹರಿಸುವ ಭರವಸೆ ನೀಡಿದ್ದಲ್ಲದೆ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪನವರ ಒಪ್ಪಿಗೆ ಪಡೆದು, ಈ ಭದ್ರಾ ಯೋಜನೆಗೆ ಬಜೆಟ್ ನಲ್ಲಿ ಮೊದಲ ಬಾರಿಗೆ ಅನುದಾನ ಮೀಸಲಿಡಲಾಯಿತು ಎಂದರು.

    ಈಗ ವಾಣಿವಿಲಾಸ ಸಾಗರದಿಂದ ವೇದಾವತಿ ನದಿ ಪಾತ್ರದ ಮೂಲಕ ಧರ್ಮಪುರ ಕೆರೆಗೆ ನೀರು  ಹರಿಸುವ ಮಹತ್ವಾಕಾಂಕ್ಷೆ ಯೋಜನೆಗೆ ಇಂದು ಶಂಕುಸ್ಥಾಪನೆ ನೆರವೇರಿಸಲಾಗಿದ್ದು, ಇದರಿಂದ ಈ ಭಾಗದ ಜನರ ಸುಮಾರು ನೂರು ವರ್ಷಗಳ ಬೇಡಿಕೆ ಈಡೇರಿಸುವುದರ ಜೊತೆಗೆ ಈ ಹೋಬಳಿಯ ವಿವಿಧ ಕೆರೆಗಳಿಗೆ ನೀರುಣಿಸುವ ಸುಮಾರು 90 ಕೋಟಿ ವೆಚ್ಚದ ಕಾಮಗಾರಿಗೆ ನಮ್ಮ ಬಿಜೆಪಿ ಸರ್ಕಾರ ಅನುಮೋದನೆ ನೀಡಲಾಗಿದ್ದು, ಈ ಬೇಡಿಕೆ ಈಡೇರಿಸುವಲ್ಲಿ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಪರಿಶ್ರಮ ಅಪಾರವಾದದ್ದು ಎಂದರು.

    ತಾಲೂಕಿನ ಶಾಸಕಿ ಕೆ.ಪೂರ್ಣಿಮಾ ಅವರು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಕೇಂದ್ರ ವಸತಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್, ರಾಜ್ಯ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ಕರ್ನಾಟಕ ರಾಜ್ಯ ಮುಖ್ಯಸಚೇತಕರಾದ ವೈ.ಎ.ನಾರಾಯಣಸ್ವಾಮಿ, ಚಿತ್ರದುರ್ಗ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ, ಸಿರಾ ಶಾಸಕ ರಾಜೇಶ್ ಗೌಡ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ವಿಧಾನಪರಿಷತ್ ಸದಸ್ಯರುಗಳಾದ ಚಿದಾನಂದಗೌಡ, ಕೆ.ಎಸ್.ನವೀನ್, ಮಾಜಿ ಶಾಸಕ ಆರ್.ರಾಮಯ್ಯ, ಪ್ರವರ್ಗ-1 ರ  ರಾಜ್ಯ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಜಿಲ್ಲಾಧಿಕಾರಿಗಳಾದ ಕವಿತಾ ಮಣ್ಣಿಕೇರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಪರಶುರಾಮ್, ವಿಶ್ವೇಶ್ವರಯ್ಯ ಜಲನಿಗಮದ ಮುಖ್ಯ ಇಂಜಿನಿಯರ್ ರವೀಂದ್ರ, ಅಧೀಕ್ಷಕ ಇಂಜಿನಿಯರ್ ಎಫ್.ಹೆಚ್.ಲಮಾಣಿ, ಕಾರ್ಯಪಾಲಕ ಇಂಜಿನಿಯರ್ ಮಲ್ಲಿಕಾರ್ಜುನ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಎಸ್.ರಘುನಾಥ್, ಬಸವಾನಂದ್, ಎಂ.ಜಿ.ಗೋವಿಂದಯ್ಯ, ಡಾ.ವಿರುಪಾಕ್ಷಪ್ಪ, ಜಯರಾಜ್, ಹಾರ್ಡ್ ವೇರ್ ಶಿವಣ್ಣ, ಶ್ರವಣಗೆರೆ ಶಿವಣ್ಣ, ನೀರಾವರಿ ಹೋರಾಟ ಸಮಿತಿ ಮುಖಂಡರುಗಳಾದ ಹೆಚ್.ಆರ್.ತಿಮ್ಮಯ್ಯ, ಪ್ರಕಾಶ್ ಬಬ್ಬೂರು, ಮದ್ದಿಹಳ್ಳಿ ದೊಡ್ಡಯ್ಯ, ಗಿರಿರಾಜ್ ಸಕ್ಕರ, ತಾಲ್ಲೂಕು ಬಿ.ಜೆ.ಪಿ. ಅಧ್ಯಕ್ಷ ವಿಶ್ವನಾಥ್,  ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು , ನಗರಸಭೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಎಲ್ಲಾ ಸರ್ಕಾರಿ ಇಲಾಖೆಯ ಅಧಿಕಾರಿಗಳು ಮಾಹಿ ಜ್ಯುವೆಲರ್ಸ್ ಮಾಲಿಕರಾದ ಕೌಶಿಕ್ ನಾಯ್ಡು ಸೇರಿದಂತೆ ಪಕ್ಷದ ಕಾರ್ಯಕರ್ತರು ಮುಖಂಡರುಗಳು    ಉಪಸ್ಥಿತರಿದ್ದರು.

    ವರದಿ: ಮುರುಳಿಧರನ್ ಆರ್. ಹಿರಿಯೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ತಿಪಟೂರಿನ ಎಚ್.ಬೈರಾಪುರದಲ್ಲಿ ಕರಿಯಮ್ಮ, ಪ್ಲೇಗಿನಮ್ಮ ದೇವಿ ಜಾತ್ರೆ: ವಿಜೃಂಭಣೆಯ ರಥೋತ್ಸವಕ್ಕೆ ತೆರೆ

    April 9, 2026

    ಮಧುಗಿರಿಯಲ್ಲಿ ನಾಗಾರ್ಜುನ ಸಾಗರ್ ರೇಸರ್ ಹಾವು ಪತ್ತೆ

    April 4, 2026

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    Leave A Reply Cancel Reply

    Our Picks

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಭಿಮಾನಿಗಳಿಗೆ ಶಾಕ್ ನೀಡಿದ ರಾಕಿಂಗ್ ಸ್ಟಾರ್: ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮುಂದೂಡಿಕೆ!

    April 29, 2026

    ಬೆಂಗಳೂರು: ಕೆಜಿಎಫ್ ಸರಣಿಯ ಅಭೂತಪೂರ್ವ ಯಶಸ್ಸಿನ ನಂತರ, ಇಡೀ ವಿಶ್ವವೇ ಎದುರು ನೋಡುತ್ತಿದ್ದ ಯಶ್ ಅಭಿನಯದ ‘ಟಾಕ್ಸಿಕ್: ಎ ಫೇರಿ…

    ಕಡೂರು: ಕೌಟುಂಬಿಕ ಕಲಹಕ್ಕೆ ಪಿಎಸ್‌ ಐ ಪತ್ನಿ ಬಲಿ: ನೇಣಿಗೆ ಶರಣಾದ ಯುವತಿ

    April 29, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ತಾಲ್ಲೂಕು ಕಚೇರಿಯಲ್ಲಿ ಕಡತ ನಾಪತ್ತೆ: ಕರ್ತವ್ಯ ಲೋಪವೆಸಗಿದ ಸಿಬ್ಬಂದಿ ವಿರುದ್ಧ ತಹಶೀಲ್ದಾರ್ ದೂರು

    April 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.