ಸರಗೂರು: ಮೈಸೂರು ವಿಭಾಗದ ನಾಯಕ ಸಮುದಾಯದ ಪ್ರಭಾವಿ ನಾಯಕರು, ಕ್ಷೇತ್ರದ ಶಾಸಕರಾದ ಅನಿಲ್ ಚಿಕ್ಕಮಾದುರವರಿಗೆ ಸಚಿವ ಸ್ಥಾನ ನೀಡಬೇಕೆಂದು ರಾಜ್ಯದ ಕಾಂಗ್ರೆಸ್ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರನ್ನು ಹಾದನೂರು ಗ್ರಾಮ ಪಂಚಾಯಿತಿ ಸದಸ್ಯೆ ಹಾಗೂ ಗ್ಯಾರಂಟಿ ಯೋಜನೆ ಸಮಿತಿ ಸದಸ್ಯೆ ಭಾಗ್ಯಕೇಂಪಸಿದ್ದ ಒತ್ತಾಯಿಸಿದ್ದಾರೆ.
ಹೆಚ್.ಡಿ.ಕೋಟೆಕ್ಷೇತ್ರದಲ್ಲಿ ಅತ್ಯಧಿಕ ಮತಗಳಿಂದ ಸತತ ಎರಡನೇ ಬಾರಿ ಭರ್ಜರಿ ಜಯಗಳಿಸಿ ಜನ ಸಾಮಾನ್ಯರೊಡನೆ ಬೆರೆತು, ಕ್ಷೇತ್ರದ ಅಭಿವೃದ್ಧಿಗಾಗಿ 7 ವರ್ಷಗಳಿಂದ ಶ್ರಮಿಸಿ ಕ್ಷೇತ್ರದ ಮನೆ ಮಗನಾಗಿದ್ದಾರೆ. ತಾಲ್ಲೂಕಿನ ಹಳ್ಳಿ-ಹಳ್ಳಿಗಳನ್ನೂ ಸುತ್ತಿ, ಕಾಡಂಚಿನ ಕಟ್ಟಕಡೆಯ ಗ್ರಾಮಗಳ ಜನರ ಕುಂದುಕೊರತೆಗಳನ್ನೂ ಆಲಿಸಿ, ಅವುಗಳನ್ನು ವಿಧಾನಸಭೆ ಕಲಾಪಗಳಲ್ಲಿ ಪ್ರಸ್ತಾಪಿಸಿ, ಚರ್ಚಿಸಿ, ಸರ್ಕಾರದ ಗಮನಕ್ಕೆ ತಂದು ಸರ್ಕಾರದಿಂದ ಹೆಚ್ಚು ಅನುದಾನ ತಂದು ತಾಲ್ಲೂಕಿನ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡು, ಪ್ರತಿಯೊಂದು ಚುನಾವಣೆಯಲ್ಲೂ ಗೆಲುವು ಸಾಧಿಸಿ ಕೋಟೆಯನ್ನು ಕಾಂಗ್ರೆಸ್ ಪಕ್ಷದ ಭದ್ರಕೋಟೆಯನ್ನಾಗಿ ರೂಪಿಸಿದ್ದಾರೆ. ಆದ್ದರಿಂದ ಹಿಂದುಳಿದ ತಾಲ್ಲೂಕಾಗಿರುವ ಕ್ಷೇತ್ರವನ್ನು ಮತ್ತಷ್ಟು ಅಭಿವೃದ್ಧಿಪಡಿಸಬೇಕಾದರೆ ಅನಿಲ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕೋಟೆ ವಿಧಾನಸಭಾ ಕ್ಷೇತ್ರದವರಿಗೆ ಈವರೆಗೆ ಕೇವಲ ಒಂದು ಬಾರಿ ಮಾತ್ರ ಸಚಿವ ಸ್ಥಾನ ನೀಡಲಾಗಿದೆ. ಆದ್ದರಿಂದ ಈ ಬಾರಿ ಸಚಿವ ಸ್ಥಾನ ದೊರೆಯುವ ನಿರೀಕ್ಷೆಯಲ್ಲಿ ಕಾರ್ಯಕರ್ತರು, ಮುಖಂಡರು, ಜನತೆ ಇದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಸಂಸದ ದಿವಂಗತ ಆರ್. ಧ್ರುವನಾರಾಯಣರವರ ಅತ್ಯಂತ ಆಪ್ತ ಶಿಷ್ಯರಾಗಿರುವ ಅನಿಲ್ ಚಿಕ್ಕಮಾದು ಅವರಿಗೆ ಜಿಲ್ಲೆಯವರೇ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ್ದಾರೆ.
ಹಳೆಯ ಮೈಸೂರು ಭಾಗದಲ್ಲಿಇರುವ ನಾಯಕ ಸಮುದಾಯದ ಏಕೈಕ ಶಾಸಕ ಅನಿಲ್ ಚಿಕ್ಕಮಾದು ಆಗಿದ್ದು, ಅವರಿಗೆ ಅವಕಾಶ ಕಲ್ಪಿಸಬೇಕು,” ಎಂದು ಆಗ್ರಹಿಸಿದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC