ಸರಗೂರು: ಚಿಕ್ಕದೇವಮ್ಮನ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಸರಗೂರು ತಾಲೂಕಿನ ಚಿಕ್ಕದೇವಮ್ಮನ ಬೆಟ್ಟದಲ್ಲಿ ತಪ್ಪಲಿನಲ್ಲಿರುವ ಹಾಲುಗಡಿಯಲ್ಲಿ ಅಕ್ರಮವಾಗಿ ಸಾರ್ವಜನಿಕರ ಸ್ಥಳದಲ್ಲೇ ಹಾಡು ಹಗಲಿನಲ್ಲೇ ಮದ್ಯ ಮಾರಾಟ ಮಾಡುತ್ತಿರುವ ಘಟನೆ ನಡೆದಿದೆ.
ಚಾಮೇಗೌಡನಹುಂಡಿ ಗ್ರಾಮದ ಕುಮಾರ್ ಎಂಬಾತ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದಾನೆ ಎಂಬ ಆರೋಪ ಕೇಳಿ ಬಂದಿದ್ದು, ಚಿಕ್ಕದೇವಮ್ಮನ ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಮದ್ಯ ಮಾರಾಟ ಮಾಡುತ್ತಿದ್ದಾನೆ ಎನ್ನಲಾಗಿದೆ.
ಇದನ್ನು ಪ್ರಶ್ನಿಸಲು ಹೋದ ಸಾರ್ವಜನಿಕರಿಗೆ ಮತ್ತು ಮಹಿಳೆಯರಿಗೆ ಅವಾಚ್ಯ ಶಬ್ದಗಳಿಂದ ಬೈದು, ಬಟ್ಟೆ ಬಿಚ್ಚಿ ಅಶ್ಲೀಲವಾಗಿ ನಡೆದುಕೊಂಡಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಭಾನುವಾರ, ಮಂಗಳವಾರ, ಶುಕ್ರವಾರ ಬೆಟ್ಟಕ್ಕೆ ಹೆಚ್ಚಾಗಿ ಭಕ್ತರು ಆಗಮಿಸುತ್ತಾರೆ. ಇಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ನಾನಾ ರೀತಿಯ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು ಆರೋಪ ಮಾಡಿದ್ದಾರೆ.
ಕೂಡಲೇ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ವ್ಯಕ್ತಿಯ ವಿರುದ್ದ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸರಗೂರು ಪೊಲೀಸ್ ಠಾಣೆಯ ಪಿಎಸ್ ಐ ಶ್ರವಣ ದಾಸ ರೆಡ್ಡಿ ಹೇಳಿದ್ದಾರೆ.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB