nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026
    Facebook Twitter Instagram
    ಟ್ರೆಂಡಿಂಗ್
    • ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ
    • ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    • ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ
    • ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!
    • ಮಾಶಾಸನ ಸ್ಥಗಿತ ಖಂಡನೆ: ಸರ್ಕಾರ ದಿವಾಳಿ ಹಂತ ತಲುಪಿದೆ: ಕೆ.ಎಂ. ತಿಮ್ಮರಾಯಪ್ಪ ಆರೋಪ
    • ಮಕ್ಕಳು ದುಶ್ಚಟಗಳಿಂದ ದೂರವಿರಿ: ಅಬಕಾರಿ ಉಪ ಅಧೀಕ್ಷಕ ದೀಪಕ್ ಎಸ್. ಕರೆ
    • ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ
    ಜಿಲ್ಲಾ ಸುದ್ದಿ July 29, 2026

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    By Ganesh TumkuruJuly 29, 2026No Comments2 Mins Read
    bidar vakilara sangha

    ಬೀದರ್: ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆಯ ತೀವ್ರ ಕೊರತೆ ಎದುರಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತಕ್ಷಣವೇ ಗಂಭೀರವಾಗಿ ಪರಿಗಣಿಸಿ ಬೀದರ್ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಹಾಗೂ ರೈತರ ನೆರವಿಗೆ ಧಾವಿಸಬೇಕು ಎಂದು ಭಾಲ್ಕಿ ತಾಲೂಕು ವಕೀಲರ ಸಂಘ ಒತ್ತಾಯಿಸಿದೆ.

    ತಾಲೂಕು ವಕೀಲರ ಸಂಘದ ಅಧ್ಯಕ್ಷ ಮಹೇಶ ರಾಚೋಟೆ ಅವರ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ವಕೀಲರು, ತಹಸೀಲ್ದಾರ್ ಕಚೇರಿಗೆ ತೆರಳಿ ಮುಖ್ಯಮಂತ್ರಿಗಳ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ತಾಲೂಕು ಆಡಳಿತಕ್ಕೆ ಸಲ್ಲಿಸಿದರು.

    “ಸಮಾಜದ ಕಷ್ಟಗಳಿಗೆ ಕಾನೂನಿನ ಚೌಕಟ್ಟಿನಲ್ಲಿ ಸ್ಪಂದಿಸುವುದು ನಮ್ಮ ಆದ್ಯ ಕರ್ತವ್ಯ. ಮಳೆಯಿಲ್ಲದೆ ಬೆಳೆ ಕಳೆದುಕೊಂಡ ಅನ್ನದಾತ ದಿಕ್ಕು ತೋಚದಂತಾಗಿದ್ದಾನೆ. ರೈತರ ಕಣ್ಣೀರು ಒರೆಸದಿದ್ದರೆ ಸಮಾಜಕ್ಕೆ ಉಳಿಗಾಲವಿಲ್ಲ. ಸರ್ಕಾರ ವಿಳಂಬ ಮಾಡದೆ ಭಾಲ್ಕಿ ತಾಲೂಕು ಸೇರಿದಂತೆ ಸಂಪೂರ್ಣ ಜಿಲ್ಲೆಯನ್ನು ಬರಗಾಲ ಎಂದು ಘೋಷಿಸಬೇಕು. ರೈತರ ಹಕ್ಕಿಗಾಗಿ ಬೀದಿಗಿಳಿದು ಹೋರಾಡಲು ವಕೀಲರ ಸಂಘ ಸದಾ ಸಿದ್ಧವಿದೆ.”

    — ಮಹೇಶ ರಾಚೋಟೆ, ಅಧ್ಯಕ್ಷರು, ಭಾಲ್ಕಿ ತಾಲೂಕು ವಕೀಲರ ಸಂಘ


    ಬೇಡಿಕೆಗಳು:

    • ಸಾಲ ಮನ್ನಾ: ರೈತರ ಕೃಷಿ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು.
    • ವೈಜ್ಞಾನಿಕ ಪರಿಹಾರ: ಬೆಳೆ ಹಾನಿಗೊಳಗಾದ ರೈತರಿಗೆ ಎಕರೆಗೆ ತಕ್ಕಂತೆ ವೈಜ್ಞಾನಿಕ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕು.
    • ಕುಡಿಯುವ ನೀರು ಹಾಗೂ ಮೇವು: ಗ್ರಾಮೀಣ ಭಾಗಗಳಲ್ಲಿ ಉಚಿತ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಅಭದ್ರತೆ ನೀಗಿಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.
    • ಕಿರುಕುಳಕ್ಕೆ ತಡೆ: ಸಾಲ ವಸೂಲಾತಿ ನೆಪದಲ್ಲಿ ಬ್ಯಾಂಕ್ ಅಧಿಕಾರಿಗಳು ಹಾಗೂ ಸಾಲ ವಸೂಲಿಗಾರರು ರೈತರಿಗೆ ಕಿರುಕುಳ ನೀಡದಂತೆ ಕಟ್ಟುನಿಟ್ಟಿನ ತಡೆಯಾಜ್ಞೆ ಹೊರಡಿಸಬೇಕು.

    ಸರ್ಕಾರ ಮನವಿಗೆ ಸಕರಾತ್ಮಕವಾಗಿ ಸ್ಪಂದಿಸದಿದ್ದರೆ, ಕೋರ್ಟ್ ಕಲಾಪಗಳನ್ನು ಬದಿಗಿಟ್ಟು ರೈತರೊಂದಿಗೆ ಬೀದಿಗಿಳಿದು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ವಕೀಲರ ಸಂಘ ಎಚ್ಚರಿಸಿದೆ.

    ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಕರಂದ ಮಾನಕಾರಿ, ಪ್ರಧಾನ ಕಾರ್ಯದರ್ಶಿ ವಾಗೇಶ ಪಾಟೀಲ್, ಜಂಟಿ ಕಾರ್ಯದರ್ಶಿ ನೀಲಕಂಠ ಬಿರಾದಾರ್, ಹಿರಿಯ ನ್ಯಾಯವಾದಿ ರಾಜಶೇಖರ ಅಷ್ಟೂರೆ ಸೇರಿದಂತೆ ಅನೇಕ ವಕೀಲರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    Ganesh Tumkuru
    • Website

    Related Posts

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ಸರಗೂರು: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅರ್ಥಪೂರ್ಣ ವಿಶ್ವ ಜನಸಂಖ್ಯಾ ದಿನಾಚರಣೆ

    July 28, 2026

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಕುಣಿಗಲ್: ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚು ವಿವರ ಘೋಷಣೆ

    July 29, 2026

    ಕುಣಿಗಲ್: ಪಟ್ಟಣದಲ್ಲಿ ಇತ್ತೀಚೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಿದ ಗ್ರಾಮ ದೇವತೆ ಜಾತ್ರಾ ಮಹೋತ್ಸವದ ಜಮಾ–ಖರ್ಚಿನ ಸಂಪೂರ್ಣ ವಿವರವನ್ನು ಗ್ರಾಮ ದೇವತೆ…

    ಬೀದರ್ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಭಾಲ್ಕಿ ವಕೀಲರ ಸಂಘ ಆಗ್ರಹ

    July 29, 2026

    ಬಡವರಿಗೆ ಮಾಡುವ ಸಹಾಯ ದೇವರಿಗೆ ಸಾಲ ಕೊಟ್ಟಂತೆ: ಇಮ್ಯಾನುವೆಲ್ ದರ್ಬಾರೆ

    July 29, 2026

    ನೀಟ್ ಹಗರಣ ವಿರುದ್ಧದ ಒಂದು ತಿಂಗಳ ಐತಿಹಾಸಿಕ ಹೋರಾಟಕ್ಕೆ ಸಂದ ಜಯ: ತುಮಕೂರಿನಲ್ಲಿ AIDSO, AIMSS ವಿಜಯೋತ್ಸವ!

    July 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.