ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಫೆಬ್ರವರಿ 11ರಂದು ಬೆಳಿಗ್ಗೆ 10:30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ “ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ, ಪ್ರಬಂಧ, ಕವನ ವಾಚನ, ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು.
ಕಾರ್ಯಕ್ರಮವನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಎನ್. ಛಲವಾದಿ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಕಾನೂನು ಸಲಹೆಗಾರ ಡಾ.ಬಾಬಾ ಸಾಹೇಬ್ ಜಿನರಾಳ್ಕರ್ ಹಾಗೂ ಆನಂದ್ ಪಬ್ಲಿಕೇಶನ್ ನ ಲೇಖಕ ಮತ್ತು ಪ್ರಕಾಶಕ ಶಂಕರಾನಂದ್ ಎಂ.ವಿ. ಅವರು ಉಪನ್ಯಾಸ ನೀಡಲಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx