ಅರುಣಾಚಲ ಪ್ರದೇಶ : ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ನಡೆದಿದ್ದು, ಗುಂಡಿನ ಚಕಮಕಿಯಲ್ಲಿ ಉಭಯ ದೇಶಗಳ ಸೈನಿಕರು ಗಾಯಗೊಂಡಿದ್ದಾರೆ. ತವಾಂಗ್ ಬಳಿ ಡಿಸೆಂಬರ್ 9 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಅಕ್ಟೋಬರ್ 2021ರಲ್ಲಿ, ಅರುಣಾಚಲ ಪ್ರದೇಶದ ಯಾಂಗ್ಸೆಯಲ್ಲಿ ಎರಡೂ ದೇಶಗಳ ಸೈನಿಕರ ನಡುವೆ ವಿವಾದವಿತ್ತು. 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ.
ಜೂನ್ 15, 2020ರ ಘಟನೆಯ ನಂತರ ಇದೇ ಮೊದಲನೆಯದು. ನಂತರ ಲಡಾಖ್ ನ ಗಾಲ್ವಾನ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗಿನ ಹಿಂಸಾತ್ಮಕ ಘರ್ಷಣೆಯಲ್ಲಿ 20 ಭಾರತೀಯ ಸೈನಿಕರು ಹುತಾತ್ಮರಾಗಿದ್ದರು ಮತ್ತು ಅನೇಕರು ಗಾಯಗೊಂಡರು. ಈ ಚಕಮಕಿಯಲ್ಲಿ ಚೀನಾದ ಹಲವು ಸೈನಿಕರು ಕೂಡ ಸಾವನ್ನಪ್ಪಿದ್ದಾರೆ.
ಅಕ್ಟೋಬರ್ 2021ರಲ್ಲಿ, ಕೆಲವು ಚೀನೀ ಸೈನಿಕರನ್ನು ಯಾಂಗ್ಸೆಯಲ್ಲಿ ಕೆಲವು ಗಂಟೆಗಳ ಕಾಲ ಭಾರತೀಯ ಸೈನಿಕರು ಬಂಧಿಸಿದಾಗ ಇದೇ ರೀತಿಯ ಘಟನೆ ನಡೆಯಿತು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy