nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೇ ಜೋಡಿಸಲು ಸಾಧ್ಯವಿಲ್ಲ: ಭಾರತ್ ಜೋಡೋ ಬಗ್ಗೆ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ
    ರಾಜ್ಯ ಸುದ್ದಿ October 2, 2022

    ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನೇ ಜೋಡಿಸಲು ಸಾಧ್ಯವಿಲ್ಲ: ಭಾರತ್ ಜೋಡೋ ಬಗ್ಗೆ ಸಚಿವ ಎ.ನಾರಾಯಣಸ್ವಾಮಿ ಹೇಳಿಕೆ

    By adminOctober 2, 2022No Comments2 Mins Read
    narayan swamy

    ಕೊರಟಗೆರೆ: ರಾಹುಲ್ ಗಾಂಧಿಯವರ ಭಾರತ್ ಜೋಡೋ ಕಾರ್ಯಕ್ರಮವು ಅವರ ಪಕ್ಷದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ರವರನ್ನು ಜೋಡಿಸಲು ಸಾಧ್ಯವಿಲ್ಲ ಇನ್ನು ದೇಶವನ್ನು ಜೋಡಿಸಲು ಸಾಧ್ಯವೇ? ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ಟೀಕಿಸಿದರು.

    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ರವರ ಹುಟ್ಟು ಹುಬ್ಬದ ಅಂಗವಾಗಿ ಕೊರಟಗೆರೆ ವಿಧಾನ ಸಭಾ ಬಿಜೆಪಿ ಅಭ್ಯರ್ಥಿ ಆಕಾಂಕ್ಷಿ ಡಾ.ಲಕ್ಷೀಕಾಂತ್ ಹಮ್ಮಿಕೊಂಡಿದ್ದ ವಾಲಿಬಾಲ್ ಪಂದ್ಯವಾಳಿಗಳ ಕಾರ್ಯಕ್ರಮದ ಉದ್ಘಾಟನೆಗೂ ಮುಂಚಿತವಾಗಿ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರೊಡನೆ ಮಾತನಾಡಿದರು.


    Provided by
    Provided by

    ಭಾರತ್ ಜೋಡೋ ಕಾರ್ಯಕ್ರಮ ರಾಹುಲ್ ಗಾಂಧಿಯವರು ಯಾವ ಕಾರಣಕ್ಕಾಗಿ ಮಾಡುತ್ತಿದ್ದರೂ ತಿಳಿಯುತ್ತಿಲ್ಲ,ಕರ್ನಾಟಕದಲ್ಲೇ ಕಾಂಗ್ರೆಸ್ ಪಕ್ಷನ್ನು ಜೋಡಿಸಲಾಗದ ಸ್ಥಿತಿ ಇದ್ದು ದೇಶ ಜೋಡಿಸಲು ಹೋಗುವುದು ಪ್ರಯೋಜನವಿದೆಯಾ ಎಂದು ಪ್ರಶ್ನಿಸಿದರು.

    ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಬೆಳ್ಳಿಗೆ ಎದ್ದಾಗ ಅವರು ಮೊದಲು ಜಪ ಮಾಡುವುದು ಆರ್.ಎಸ್.ಎಸ್. ಸಂಘಟನೆ  ಬಗ್ಗೆಯೇ, ಈ ಸಂಘಟನೆಯನ್ನು ಕಾಂಗ್ರೆಸ್ ಪಕ್ಷ ತಮ್ಮ ಅಧಿಕಾರ ಅವಧಿಗಳಲ್ಲಿ ದುರುದ್ದೇಶ ಪೂರ್ವಕವಾಗಿ ಕಾರಣವಿಲ್ಲದೇ ನಿಷೇಧ ಮಾಡಿದ್ದರು ಎಂದು ಅವರು ಆರೋಪಿಸಿದರು.

    ಪಿ.ಎಪ್.ಐ. ಸಂಘಟನೆಯನ್ನು ಎನ್.ಐ.ಎ. ಸಂಪೂರ್ಣ ತನಿಖೆ ಮಾಡಿ ಸಾಕ್ಷ್ಯ ಸಂಗ್ರಹಿಸಿ ದೇಶದ  ಪ್ರಭುದ್ದ ಮುಸ್ಲಿಂ ಸಂಘಟನೆಗಳೊಂದಿಗೆ ಚರ್ಚಿಸಿ ನಿಷೇಧಿಸಲಾಗಿದೆ. ಆರ್.ಎಸ್,ಎಸ್  ಎಂದಿಗೂ ದೇಶ ದೋಹ ಕೆಲಸ ಮಾಡಿಲ್ಲ, ಸಿದ್ದರಾಮಯ್ಯ ಯಾರನ್ನೋ ಮೆಚ್ಚಿಸಲು ಆ ಸಂಘಟನೆಯನ್ನು ನಿಷೇಧಿಸಲು ಒತ್ತಾಯಿಸುತ್ತಿದ್ದಾರೆ ಎಂದರು.

    ದೇಶದಲ್ಲಿ ನಿಜವಾದ ದಲಿತ ಮತ್ತು ಸಂವಿಧಾನ ವಿರೋಧಿಗಳು ಕಾಂಗ್ರೆಸ್ ಪಕ್ಷವರು, ಆದರೆ ಅದನ್ನು ಬಿ.ಜೆ.ಪಿ ಮೇಲೆ ಹಾಕಲು ಬಹಳ ಶ್ರಮ ಪಡುತ್ತಿದ್ದಾರೆ. ದೇಶದಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಎಂ.ಪಿ. ಎ.ಎಲ್.ಎ. ಸಚಿವರು ಇರುವುದು ಬಿಜೆಪಿಯಲ್ಲಿ, ರಾಜ್ಯದಲ್ಲಿ ದಲಿತ ನಾಯಕ ಗೋವಿಂದ ಕಾರಜೋಳರವರನ್ನು ಉಪಮುಖ್ಯಮಂತ್ರಿ ಮಾಡಿದ್ದೇವೆ. ಸಂವಿದಾನ ಶಿಲ್ಪಿ ಬಾಬಾ ಸಾಹೇಬ ಅಂಬೇಡ್ಕರ್ ಅವರಿಗೆ ದುಃಖ ನೀಡಿದ್ದು, ಅವಮಾನಿಸಿದ್ದು, ಸಂವಿಧಾನ ಬದಲಾವಣೆ ಮಾಡಿದ್ದು ಕಾಂಗ್ರೆಸ್ ಪಕ್ಷ ಎನ್ನುವುದು ದಲಿತರು ಮರೆತಿಲ್ಲ ಎಂದರು.

    ನಾನು ಸಚಿವನಾದ ಮೇಲೆ ನನ್ನ ಇಲಾಖೆಯಿಂದ ನ್ಯಾಷನಲ್ ಎಸ್.ಸಿ/ ಎಸ್.ಟಿ ಕಾರ್ಪರೇಷನ್ ನಿಂದ ರಾಜ್ಯಗಳ ಅಭಿವೃದ್ಧಿಗೆ ಅತಿ ಕಡಿಮೆ ಬಡ್ಡಿ ಸಾಲ ಕೊಡಲಾಗುತ್ತಿದೆ, ಕೇಂದ್ರ ಸರ್ಕಾರದ ಆದರ್ಶ ಗ್ರಾಮಗಳನ್ನು ಗುಡಿಸಲು ಮುಕ್ತ ಮಾಡುವುದು, ಅಲ್ಲಿ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಭವನ ನಿರ್ಮಾಣ, ದೇಶದಲ್ಲಿ ಪ್ರತಿ ವರ್ಷ 3,000 ವಿದ್ಯಾರ್ಥಿಗಳಿಗೆ ಉಚಿತ ಯು.ಪಿ.ಎಸ್.ಸಿ. ತರಬೇತಿ ನೀಡಲಾಗುತ್ತಿದೆ ಹಾಗೂ ಪ್ರತಿ ರಾಜ್ಯದಲ್ಲೂ ತರಬೇತಿ ಸಂಸ್ಥೆಯನ್ನು ತೆರೆಯಲಾಗುವುದು ಎಂದರು.

    ಕೊರಟಗೆರೆ ವಿಧಾನ ಸಭಾ ಕ್ಷೇತ್ರದಲ್ಲಿ ಪಕ್ಷದಲ್ಲಿ ಆಕಾಂಕ್ಷಿಗಳು ಹೆಚ್ಚಾಗಿದ್ದು, ಪಕ್ಷ ನಾಯಕರು ಮುಖಂಡರು ಅದನ್ನು ಸರಿತೂಗಿಸುವರು ಮತ್ತೆ ರಾಜ್ಯದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.

    ಈ ಸಂದರ್ಭದಲ್ಲಿ ಪಕ್ಷದ ವಿಧಾನ ಸಭಾ ಆಕಾಂಕ್ಷಿ ಡಾ.ಲಕ್ಷೀಕಾಂತ್, ಮಧುಗಿರಿ ಜಿಲ್ಲಾಧ್ಯಕ್ಷ ಬಿ.ಕೆ.ಮಂಜುನಾಥ್, ತಾಲೂಕು ಅಧ್ಯಕ್ಷ ಪವನ್‌ ಕುಮಾರ್, ಮಧುಗಿರಿ ತಾಲೂಕು ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರುಗಳಾದ ತಿಮ್ಮಜ್ಜ, ವಿಜಯ್‌ಕುಮಾರ್, ಸುಶೀಲಮ್ಮ, ಮಮತಾ, ಗುರುದತ್, ದೇವರಾಜು, ಅರುಣ್ ಕುಮಾರ್, ಸ್ವಾಮಿ, ಭಾನುಪ್ರಕಾಶ್, ಸೇರಿದಂತೆ ಇತರರು ಹಾಜರಿದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಿರುತೆರೆ ಮತ್ತು ಬೆಳ್ಳಿತೆರೆಯ ಜನಪ್ರಿಯ ನಟ ದಿಲೀಪ್ ರಾಜ್ ಇನ್ನಿಲ್ಲ: ಹೃದಯಾಘಾತದಿಂದ ನಿಧನ: ಬೆಳಗ್ಗಿನ ಜಾವ ಆಗಿದ್ದೇನು?

    May 13, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.