ತಿಪಟೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆ ಪ್ರಮುಖವಾಗಿ ಮೂರು ಆಶಯಗಳಲ್ಲಿ ನಡೆಯುತ್ತಿದೆ ರಾಹುಲ್ ಗಾಂಧಿಯವರು ದ್ವೇಷ ನಿರುದ್ಯೋಗ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಪ್ರಶ್ನೆಯನ್ನು ಇಟ್ಟುಕೊಂಡು ಐಕ್ಯತೆಯ ಹೆಜ್ಜೆ ಹಾಕುತ್ತಿದ್ದಾರೆ ಎಂದು ಕೆಪಿಸಿಸಿ ಮುಖ್ಯ ವಕ್ತಾರ ಡಾಕ್ಟರ್ ಸಿ.ಎಸ್.ದ್ವಾರಕನಾಥ್ ಹೇಳಿದರು.
ನಗರದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡರು ಭಾರತ್ ಜೋಡೋ ಯಾತ್ರೆ ಕುರಿತು ಮಾಹಿತಿ ನೀಡಿದರು.
ಕಾಂಗ್ರೆಸ್ ಮುಖಂಡ ಸಿಬಿ ಶಶಿಧರ್ ಮಾತನಾಡಿ, ಇದು ಕಾಂಗ್ರೆಸ್ ಯಾತ್ರೆ ಮಾತ್ರವಲ್ಲ ಹೊಡೆದ ಮನಸ್ಸುಗಳನ್ನು ಜೋಡಿಸುವ ಯಾತ್ರೆ. ಬಿಜೆಪಿ ಹಾಗೂ ಕೋಮುವಾದಿ ಮನಸ್ಥಿತಿಯನ್ನು ವಿರೋಧಿಸುವ ಪಾದಯಾತ್ರೆಯಾಗಿದೆ. ಇದರಲ್ಲಿ ಇಡೀ ನಾಗರಿಕ ಸಮಾಜ ಪಾಲ್ಗೊಳ್ಳಬೇಕೆಂದು ಕರೆ ನೀಡಿದರು.
ಪಾದಯಾತ್ರೆಯಲ್ಲಿ ಜನಸ್ಪಂದನ ಟ್ರಸ್ಟ್ ಹಾಗೂ ಬೆಂಗಳೂರಿನ ಬಿ ಕಲ್ಚರ್ ಎಂಬ ಅಂತರಾಷ್ಟ್ರೀಯ ಮಟ್ಟದ ಸುಮಾರು 20ರಿಂದ 30 ಕಲಾವಿದರು ರಚಿಸಿರುವ ಭಾರತ್ ಜೋಡೋಗೆ ಸಂಬಂಧಿಸಿದ ಕಲಾಕೃತಿಗಳನ್ನು ಪ್ರದರ್ಶಿಸಲಾಗುವುದು. ಈ ಕಲಾಕೃತಿಗಳ ಪ್ರದರ್ಶನವನ್ನು ರಾಹುಲ್ ಗಾಂಧಿಯವರು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಈ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತ್ರಿ ಭಯಂಕ, ಲೇಖಕ ಗಂಗಾಧರ, ಕಲಾತಂಡದ ಸತೀಶ್, ಯುವ ನಾಯಕರಾದ ಪುನೀತ್ ಶಂಕರ್ ಮುಖಂಡರುಗಳು ಭಾಗವಹಿಸಿದ್ದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy