ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಅವರು ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಉಕ್ರೇನ್ ರಾಯಭಾರಿಗಳನ್ನು ವಜಾಗೊಳಿಸಿದ್ದಾರೆ ಎಂದು ಸುದ್ದಿಮೂಲಗಳು ತಿಳಿಸಿವೆ.
ಈ ಕ್ರಮಕ್ಕೆ ಯಾವುದೇ ಕಾರಣವನ್ನು ನೀಡದ ಅವರು ಸದ್ಯ ಜರ್ಮನಿ, ಭಾರತ, ಜೆಕ್ ರಿಪಬ್ಲಿಕ್, ನಾರ್ವೆ ಮತ್ತು ಹಂಗೇರಿಯಲ್ಲಿ ಉಕ್ರೇನ್‌ನ ರಾಯಭಾರಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದ್ದಾರೆ.ಈ ರಾಯಭಾರಿಗಳಿಗೆ ಹೊಸ ಜವಾಬ್ದಾರಿಯನ್ನು ನೀಡುವುದರ ಬಗ್ಗೆಯೂ ಕೂಡ ಯಾವುದೇ ಮಾಹಿತಿ ನೀಡಿಲ್ಲ ಎನ್ನಲಾಗಿದೆ.
ಫೆಬ್ರುವರಿ 24 ರ ರಷ್ಯಾದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸುತ್ತಿರುವಾಗ ಉಕ್ರೇನ್‌ಗೆ ಅಂತರರಾಷ್ಟ್ರೀಯ ಬೆಂಬಲ ಮತ್ತು ಮಿಲಿಟರಿ ಸಹಾಯವನ್ನು ಹೆಚ್ಚಿಸಲು ಝೆಲೆನ್ಸ್ಕಿ ತನ್ನ ರಾಜತಾಂತ್ರಿಕರನ್ನು ಒತ್ತಾಯಿಸಿದ್ದಾರೆ.
ಉಕ್ರೇನ್-ರಷ್ಯಾ ನಡುವಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತವು ರಷ್ಯಾ ವಿರುದ್ಧವಾಗಿ ಮತ ಚಲಾಯಿಸದೇ ಮತದಾನದಿಂದ ದೂರ ಉಳಿದಿತ್ತು, ಇನ್ನೊಂದೆಡೆಗೆ ಭಾರತದ ನಡೆಗೆ ರಷ್ಯಾ ದೇಶವು ಮೆಚ್ಚುಗೆ ವ್ಯಕ್ತಪಡಿಸಿದ್ದರೆ, ಪಾಶ್ಚ್ಯಾತ್ಯ ದೇಶಗಳು ಅಸಮಾಧಾನ ವ್ಯಕ್ತಪಡಿಸಿದ್ದವು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz