ತೀವ್ರ ಆರ್ಥಿಕ ಹೊಡೆತಕ್ಕೆ ಸಿಲುಕಿ ನಲುಗಿರುವ ಶ್ರೀಲಂಕಾಕ್ಕೆ ಭಾರತ ಮತ್ತೆ ನೆರವಿನ ಹಸ್ತ ಚಾಚಿದೆ. ಶ್ರೀಲಂಕಾಕ್ಕೆ ಪೆಟ್ರೋಲ್ ಸರಬರಾಜು ಮಾಡುತ್ತಿದ್ದು ಇದರಿಂದಾಗಿ ಸ್ವಲ್ಪ ಮಟ್ಟಿಗೆ ಸರ್ಕಾರ ಮತ್ತು ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.
ಆರ್ಥಿಕ ಬಿಕ್ಕಟ್ಟಿನಿಂದಾಗಿ ಶ್ರೀಲಂಕಾದಲ್ಲಿ ಪೆಟ್ರೋಲ್ ಖಾಲಿಯಾಗಿದ್ದು, ಜನರು ಪರಿತಪಿಸುವಂತಾಗಿದೆ. ಕೇವಲ ಒಂದು ದಿನಕ್ಕೆ ಸಾಕಾಗುವಷ್ಟು ಮಾತ್ರ ಪೆಟ್ರೋಲ್ ಇದೇ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿನ್ನೆಯಷ್ಟೇ ಹೇಳಿಕೆ ನೀಡಿದ ಬೆನ್ನಲ್ಲೇ ಭಾರತ ಪೆಟ್ರೋಲ್ ಸರಬರಾಜು ಮಾಡುತ್ತಿದೆ.
ಎರಡು ಹಂತಗಳಲ್ಲಿ ಪೆಟ್ರೋಲ್ ಸರಬರಾಜು ಮಾಡಲಾಗುತ್ತಿದೆ. ಇದು ಭಾರತೀಯ ಕ್ರೆಡಿಟ್ ಲೈನ್‌ಯಡಿಯಲ್ಲಿ ಮೇ ೧೮ ಮತ್ತು 19 ರಂದು ಬರಲಿದೆ ಎಂದು ವಿಕ್ರಮಸಿಂಘೆ ಟ್ವೀಟ್ ಮಾಡಿದ್ದಾರೆ.
ದೇಶದ ಆರ್ಥಿಕ ಪರಿಸ್ಥಿತಿ ಸರಿದೂಗಿಸಲು 75 ದಶಲಕ್ಷ ಅಮೆರಿಕನ್ ಡಾಲರ್ ಅವಶ್ಯಕತೆಯಿದೆ. ಈ ಹಿನ್ನೆಲೆಯಲ್ಲಿ ಮುಕ್ತ ಮಾರುಕಟ್ಟೆಯ ಡಾಲರ್‌ಗಳನ್ನು ಪಡೆಯಲು ಕಾರ್ಯೋನ್ಮುಖರಾಗಿದ್ದಾರೆ ಎಂದು ಅವರು ತಿಳಿಸಿದರು.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5