ಭಾರತೀಯ ನೌಕಾಪಡೆಯಲ್ಲಿ ಅಭ್ಯರ್ಥಿಗಳಿಗೆ ಅವಕಾಶ ಶಾರ್ಟ್ ಸರ್ವಿಸ್ ಕಮಿಷನ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇದೇ 29ರಂದು ಆರಂಭವಾಗಿದೆ. ಅರ್ಜಿ ನಮೂನೆಯನ್ನು ಸಲ್ಲಿಸಲು ಕೊನೆಯ ದಿನಾಂಕ ಮೇ 14.
ಅರ್ಹ ಅಭ್ಯರ್ಥಿಗಳು ಶಾರ್ಟ್ ಸರ್ವಿಸ್ ಕಮಿಷನ್ (SSC) ಕಾರ್ಯನಿರ್ವಾಹಕ ಶಾಖೆ, ಶಿಕ್ಷಣ ಶಾಖೆ ಮತ್ತು ಭಾರತೀಯ ನೌಕಾಪಡೆಯ ತಾಂತ್ರಿಕ ಶಾಖೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. 242 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಯನಿರ್ವಾಹಕ ಶಾಖೆಗೆ 150 ಹುದ್ದೆಗಳು, ಶಿಕ್ಷಣ ಶಾಖೆಗೆ 12 ಹುದ್ದೆಗಳು ಮತ್ತು ತಾಂತ್ರಿಕ ಶಾಖೆಗೆ 80 ಹುದ್ದೆಗಳು.
ಅರ್ಹತೆಯ ಮಾನದಂಡ: ಪದವಿ ಅಥವಾ ಸ್ನಾತಕೋತ್ತರ ಪದವಿ (60 ಪ್ರತಿಶತ ಅಂಕಗಳು ಅಥವಾ ಸಮಾನ CGPA)/ ಸಮಾನವಾದ CGPA ಅಥವಾ ವಿದೇಶಿ ವಿಶ್ವವಿದ್ಯಾಲಯದಿಂದ 60% ಅಂಕಗಳೊಂದಿಗೆ ಎಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ: ಭಾರತೀಯ ನೌಕಾಪಡೆಯ ವೆಬ್‌ಸೈಟ್ www.joinindiannavy.gov.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


