ಹುಬ್ಬಳ್ಳಿ– ಧಾರವಾಡ : ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅವಮಾನ ಎಸಗಿದ ರಾಯಚೂರು ಜಿಲ್ಲಾ ಮ್ಯಾಜಿಸ್ಟ್ರೇಟ್ ಮಲ್ಲಿಕಾರ್ಜುನ ಗೌಡ ವಿರುದ್ಧ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಭಾರತೀಯ ದಲಿತ ಸಂಘರ್ಷ ಸಮಿತಿ ಧಾರವಾಡ ತಹಶೀಲ್ದಾರರ ಮುಖಾಂತರ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿತು.
ಹುಬ್ಬಳ್ಳಿ- ಧಾರವಾಡ ಮಹಾನಗರದ ಸಮಾಜ ಸೇವಾ ರತ್ನ ಡಾ.ಹೆಚ್ ಪ್ರಕಾಶ ಬೀರಾವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಫೋಟೋವನ್ನು ತೆರವುಗೊಳಿಸಿದ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಉದ್ಧಟತನ ತೋರಿದ್ದಾರೆ. ಅವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಹು.ದಾ.ಮ.ನ. ಅಧ್ಯಕ್ಷರಾದ ಲಕ್ಷ್ಮಣಕುಡ್ಲೂರು, ರಾಜ್ಯ ಹಿರಿಯ ಉಪಾಧ್ಯಕ್ಷರಾದ ಕಲ್ಮೇಶ ಹಾದಿಮುನಿ, ಬೆಳಗಾವಿ ವಿಭಾಗಿ ಅಧ್ಯಕ್ಷರಾದ ಶಂಕರಪ್ಪ ಎಲಿಮೇತ್ರಿ, ಧಾರವಾಡ ಜಿಲ್ಲಾ ಅಧ್ಯಕ್ಷರಾದ ಶಿವಾನಂದ ಹಲಮನಿ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ ( ಹುಬ್ಬಳ್ಳಿ- ಧಾರವಾಡ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB