ಚಿತ್ರದುರ್ಗ: ಐತಿಹಾಸಿಕ ವಾಣಿವಿಲಾಸ ಸಾಗರ ಕೋಡಿ ಹರಿದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಪ್ರಮುಖ ಬಡಾವಣೆಗಳಿಗೆ ನೀರು ನುಗ್ಗಿದೆ.
ನಗರದ ಸಿ ಎಮ್ ಬಡಾವಣೆಯಲ್ಲಿ ಮನೆಗಳಿಗೆ ನೀರು ನುಗ್ಗಿದ್ದು, ಇಲ್ಲಿನ ಜನರು ತೀವ್ರವಾಗಿ ಸಂಕಷ್ಟಕ್ಕೊಳಗಾಗಿದ್ದಾರೆ. ರಾಜಕಾಲುವೆಯನ್ನು ಸರಿಯಾದ ರೀತಿಯಲ್ಲಿ ನಿರ್ಮಿಸದೇ ಇರುವುದರಿಂದಾಗಿ ಈ ರೀತಿಯ ಸಮಸ್ಯೆಯಾಗಿದೆ ಎಂದು ಸರ್ಕಾರದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜಕಾಲುವೆ ಬಗ್ಗೆ ಜಿಲ್ಲಾಡಳಿತ ಹೆಚ್ಚು ಗಮನ ಹರಿಸಬೇಕಿದೆ. ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಿದೆ ಎಂದು ಸಿ.ಎಮ್.ಬಡಾವಣೆ ನಿವಾಸಿಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಬಡಾವಣೆಯ ಅಂಗನವಾಡಿ ಕೇಂದ್ರ ಕೂಡ ನೀರಿನಲ್ಲಿ ಮುಳುಗಡೆಯಾಗಿದ್ದು, ಇದರಿಂದಾಗಿ ಮಕ್ಕಳು ಅಂಗನವಾಡಿಗೆ ತೆರಳಲು ಸಾಧ್ಯವಾಗದೇ ಸಂಕಷ್ಟದಲ್ಲಿದ್ದಾರೆ. ಜೊತೆಗೆ ಈ ಭಾಗದಲ್ಲಿ ಬೀದಿ ದೀಪಗಳು ಕೂಡ ಇಲ್ಲ. ರಸ್ತೆಯಲ್ಲಿಯೇ ನೀರು ಹರಿಯುತ್ತಿದ್ದು, ವಿದ್ಯುತ್ ದೀಪ ಇಲ್ಲದ ಕಾರಣ ಇಲ್ಲಿ ಅವಘಡಗಳಿಗೆ ಆಹ್ವಾನ ನೀಡಿದಂತಾಗಿದೆ. ಜಿಲ್ಲಾಡಳಿತ ಈ ಬಗ್ಗೆ ತಕ್ಷಣವೇ ಕ್ರಮಕೈಗೊಂಡು ಮುಂದಾಗುವ ಅನಾಹುತ ತಪ್ಪಿಸಬೇಕಿದೆ ಎಂದು ಇಲ್ಲಿನ ನಿವಾಸಿಗಳು ಮನವಿ ಮಾಡಿದ್ದಾರೆ.
ಹಿರಿಯೂರು ನಗರದ ಪ್ರಮುಖ ತಗ್ಗು ಪ್ರದೇಶಗಳಾದ ಗೋಪಾಲಪುರ , ಕೆ ಎಮ್ ಕೊಟ್ಟಿಗೆ , ನಂಜಯ್ಯನಕೊಟ್ಟಿಗೆ ಸೇರಿದಂತೆ ತಗ್ಗುಪ್ರದೇಶಗಳಲ್ಲಿ ಮಳೆ ನೀರು ಮನೆಯ ಒಳಗೆ ನುಗ್ಗಿದ ಪರಿಣಾಮ ಜನರ ಜೀವನ ಅಸ್ತವ್ಯಸ್ತವಾಗಿದೆ. ಹಿರಿಯೂರು ನಗರದ ಸಾಗರ್ ರೆಡ್ಡಿ ಹೋಟೆಲ್ ಬಳಿ ಇರುವ ಸೇತುವೆ ಬಳಿ ಈಶ್ವರನ ದೇವಾಲಯವಿದ್ದು, ಆ ದೇವಸ್ಥಾನವು ನೀರಿನಲ್ಲಿ ಮುಳುಗಡೆಯಾಗಿದೆ.
ಈ ಸಂದಿಗ್ದ ಪರಿಸ್ಥಿತಿಯಲ್ಲಿ ನಗರದ ಬಿ ಜೆ ಪಿ ಕಾರ್ಯಕರ್ತರಾದ ಮೋಹಿ ಜ್ಯೂಯಲರ್ಸ್ ಮಾಲಿಕರಾದ ಕೌಸಿಕ್ ನಾಯ್ಡು ಹಾಗೂ ಅವರ ಸ್ನೇಹಿತರುಗಳು , ಪಕ್ಷದ ಕಾರ್ಯಕರ್ತರು ಸೇರಿ ನಗರದ ತಗ್ಗು ಪ್ರದೇಶಗಳಲ್ಲಿ ವಾಸವಿದ್ದಂತಹ ಸಾರ್ವಜನಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಮಾನವೀಯತೆ ಮೆರೆದಿದ್ದಾರೆ.
ವರದಿ: ಮುರುಳಿಧರನ್ ಆರ್., ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz