ಚಿತ್ರದುರ್ಗ: ಭಾರೀ ಮಳೆಯಿಂದಾಗಿ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ವಾರ್ಡ್ ನಂ 22 ರ ಸಿ.ಎಮ್. ಬಡಾವಣೆಯಲ್ಲಿ ಜನರು ಸಂಕಷ್ಟಕ್ಕೀಡಾಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.
ಕಳೆದ ವಾರದಿಂದಲೇ ಮಳೆ ಸುರಿಯುತ್ತಿದ್ದು, ಸಿ.ಎಮ್. ಬಡಾವಣೆಯಲ್ಲಿರುವ ಅಂಗನವಾಡಿಗೂ ನೀರು ನುಗ್ಗಿದೆ. ಸುತ್ತಮುತ್ತಲಿನ ಮನೆಗಳಿಗೆ ನೀರು ನುಗ್ಗಿದ್ದು, ಜನರ ನಿದ್ರೆ ಕೆಡಿಸಿದೆ.
ಘಟನೆಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳಿಗೂ, ಆಡಳಿತಕ್ಕೂ ಎಷ್ಟು ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳ, ಜನಪ್ರತಿನಿಧಿಗಳ ಉದಾಸೀನತೆಯಿಂದಾಗಿ ಇಲ್ಲಿನ ಜನರು ಇದೀಗ ತೀವ್ರ ಸಂಕಷ್ಟಕ್ಕೀಡಾಗಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವರದಿ: ಮುರುಳಿಧರನ್ ಆರ್., ಚಿತ್ರದುರ್ಗ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz