ಹಾಸನ: ಹೊಳೆನರಸೀಪುರದ ಪ್ರಸಿದ್ಧ ಬೆಟ್ಟದ ಮಾವಿನಕೆರೆ ರಂಗನಾಥಸ್ವಾಮಿ ದೇವಾಲಯದಲ್ಲಿ ಭವಾನಿ ರೇವಣ್ಣ ಅವರು ಪೂಜೆ ಸಲ್ಲಿಸುವಾಗ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.
ಎರಡನೇ ಶ್ರಾವಣ ಶನಿವಾರದ ಶುಭ ಸಂದರ್ಭದಲ್ಲಿ ಕುಟುಂಬಸ್ಥರೊಂದಿಗೆ ದೇವಾಲಯಕ್ಕೆ ಆಗಮಿಸಿದ ಭವಾನಿ ರೇವಣ್ಣ ಅವರು ರಂಗನಾಥಸ್ವಾಮಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಗರ್ಭಗುಡಿಯಲ್ಲಿ ಕುಳಿತು ದೇವರ ಪ್ರಾರ್ಥನೆ ಸಲ್ಲಿಸಿದ ಅವರು, ಪೂಜೆಯ ಸಂದರ್ಭದಲ್ಲಿ ತೀವ್ರ ಭಾವುಕರಾಗಿದ್ದರು.
ಪ್ರಸ್ತುತ ಜೈಲಿನಲ್ಲಿರುವ ತಮ್ಮ ಪುತ್ರ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ನೆನೆದು ಭವಾನಿ ರೇವಣ್ಣ ಅವರು ಕಣ್ಣೀರಿಟ್ಟಿದ್ದಾರೆ ಎನ್ನಲಾಗಿದೆ. ಅವರು ಕಣ್ಣೀರು ಒರೆಸಿಕೊಳ್ಳುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ.
ಈ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಡಾ. ಸೂರಜ್ ರೇವಣ್ಣ ಸೇರಿದಂತೆ ಕುಟುಂಬದ ಸದಸ್ಯರು ಭಾಗವಹಿಸಿ ದೇವರ ದರ್ಶನ ಪಡೆದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
