ಹೈದರಾಬಾದ್ : ಆಂತರಿಕ ಭದ್ರತೆಗೆ ಸಂಬಂಧಿಸಿದ ಹಲವಾರು ಸವಾಲುಗಳನ್ನು ಕಳೆದ ಒಂಬತ್ತು ವರ್ಷಗಳಲ್ಲಿ ಕೇಂದ್ರ ಸರ್ಕಾರವು ಯಶಸ್ವಿಯಾಗಿ ನಿರ್ವಹಿಸಿದೆ, ಭಯೋತ್ಪಾದನೆ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಶೂನ್ಯ ಸಹಿಷ್ಣು ನೀತಿಯು ಮುಂದುವರೆಯಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ತೆಲಂಗಾಣದ ಹಕೀಂಪೇಟ್‌ನಲ್ಲಿಯ ರಾಷ್ಟ್ರೀಯ ಕೈಗಾರಿಕಾ ಭದ್ರತಾ ಅಕಾಡೆಮಿಯಲ್ಲಿ ನಡೆದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ 54ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ಪ್ರತ್ಯೇಕತಾವಾದ, ಭಯೋತ್ಪಾದನೆ ಮತ್ತು ದೇಶ ವಿರೋಧಿ ಚಟುವಟಿಕೆಗಳು ದೇಶದ ಯಾವುದೇ ಭಾಗದಲ್ಲಿ ನಡೆದರೂ ಅದನ್ನು ದೃಢವಾಗಿ ನಿಭಾಯಿಸಲಾಗುತ್ತದೆ ಎಂದಿದ್ದಾರೆ.
ಭಯೋತ್ಪಾದನೆ ವಿರುದ್ಧ ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಮತ್ತು ರಾಜ್ಯ ಪೊಲೀಸರು ‘ಮಹತ್ವ’ದ ಪಾತ್ರ ವಹಿಸುತ್ತಿದ್ದಾರೆ ಎಂದು ಒತ್ತಿ ಹೇಳಿದ ಅವರು, ಕಳೆದ ಒಂಬತ್ತು ವರ್ಷಗಳಲ್ಲಿ ಭದ್ರತೆ ವಿಚಾರದಲ್ಲಿ ಅವರ ಪಾತ್ರ ರುಜವಾತಾಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


