ಕುಣಿಗಲ್: ಲಾರಿ ಹಾಗೂ ಬೊಲೆರೋ ವಾಹನದ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕುಣಿಗಲ್ ತಾಲೂಕಿನ ಪಿ.ಹೊನಮಾಚನಹಳ್ಳಿ ಬಳಿ ನಡೆದಿದೆ.
30 ವರ್ಷದ ವಯಸ್ಸಿನ ಸಲೀಂ ಪಾಷಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕುಣಿಗಲ್ ಮಾರ್ಗವಾಗಿ ಮದ್ದೂರಿಗೆ ಹೋಗುತ್ತಿದ್ದ ಲಾರಿ ಹುಲಿಯೂರುದುರ್ಗದಿಂದ ಪಶು ಆಹಾರ ಸಾಗಿಸುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.
ಓವರ್ ಟೇಕ್ ಮಾಡುವ ಭರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಘಟನೆ ಸಂಬಂಧ ಹುಲಿಯೂರುದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹುಲಿಯೂರುದುರ್ಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz