ಹಾವೇರಿ: ಬಸ್ಸೊಂದು ಉರುಳಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡ ಘಟನೆ ಹಾವೇರಿ ಜಿಲ್ಲೆ ಹಿರೆಕೇರೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಚಿಕ್ಕೊಣತಿ ಗ್ರಾಮದ ಬಳಿಯಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೆ ಕಾರಣಗಳೇನು ಎನ್ನುವುದು ಇನ್ನೂ ತಿಳಿದು ಬಂದಿಲ್ಲ.
ರಾಣೇ ಬೆನ್ನೂರಿಂದ ಹಾನಗಲ್ ಕಡೆ ತೆರಳುತ್ತಿದ್ದ ಸರ್ಕಾರಿ ಬಸ್ ಮಗುಚಿ ಬಿದ್ದಿದ್ದು, ಪರಿಣಾಮವಾಗಿ 15 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5


