ತಿಪಟೂರು: ಬೈಕ್ ಗೆ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಲ್ಲಿರುವ ಘಟನೆ ನಡೆದಿದ್ದು, ಅಪಘಾತದ ಭೀಕರತೆಗೆ ಜನ ಬೆಚ್ಚಿ ಬಿದ್ದಿದ್ದಾರೆ.
ಹಾಲ್ಕುರಿಕೆ ಗ್ರಾಮದ ವಾಸಿ ಸುಮಾರು 38ವರ್ಷ ವಯಸ್ಸಿನ ಮಂಜುನಾಥ್ ಅಪಘಾತದಲ್ಲಿ ಮೃತಪಟ್ಟವರಾಗಿದ್ದಾರೆ. ಮಂಜುನಾಥ್ ಅವರ ಪತ್ನಿಗೆ ಅಪಘಾತದಲ್ಲಿ ಗಾಯವಾಗಿದೆ.
ಅಪಘಾತದ ವೇಳೆ ಮಂಜುನಾಥ್ ಅವರ ತಲೆ ರಸ್ತೆಗೆ ಅಪ್ಪಳಿಸಿದ ಪರಿಣಾಮ ತಲೆ ಛಿದ್ರಗೊಂಡಿದ್ದು, ಘಟನೆಯ ದೃಶ್ಯ ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಅಪಘಾತದ ವೇಳೆ 112 ತುರ್ತು ವಾಹನಕ್ಕೆ ಕರೆ ಮಾಡಿದರೆ, 2 ಗಂಟೆಯಾದರೂ ತುರ್ತು ವಾಹನ ಸ್ಥಳಕ್ಕೆ ಬಾರದ ಹಿನ್ನೆಲೆಯಲ್ಲಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.
ಆಸ್ಪತ್ರೆಗೆ ತೆರಳಲು ಸರಿಯಾದ ವಾಹನ ಸಿಗದೇ ಮಹಿಳೆ ಸಂಕಷ್ಟಕ್ಕೀಡಾದರು. 112ತುರ್ತುವಾಹನ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದರು.
ವರದಿ : ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz