ತುಮಕೂರು: ತುಮಕೂರು ಜಿಲ್ಲೆಯಲ್ಲಿ ಪಾವಗಡ ತಾಲೂಕಿನ ಪಳವಳಿ ಕಟ್ಟೆ ಗ್ರಾಮದ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸದ್ಯದ ಮಾಹಿತಿಗಳ ಪ್ರಕಾರ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ತಿರುವಿನ ಬಳಿ ಈ ಭೀಕರ ರಸ್ತೆ ಅಪಘಾತವಾಗಿದ್ದು, ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
25 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿನ ಸಂಖ್ಯೆಯಲ್ಲಿ ಮತ್ತಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB