ಧಾರವಾಡ : ಖಾಸಗಿ ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲಘಟಗಿಯ ಧಾರವಾಡ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿದ್ದವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


