ಭೀಕರ ಅಪಘಾತವೊಂದರಲ್ಲಿ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಫರಿದಾಬಾದ್-ಗುರುಗ್ರಾಮ್ ರಸ್ತೆಯಲ್ಲಿ ನಡೆದಿದ್ದು, ರಸ್ತೆಯಲ್ಲಿ ವೇಗವಾಗಿ ಬಂದ ಡಂಪರ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ.
ಮಂಗರ್ ಪೊಲೀಸ್ ಪೋಸ್ಟ್ ಬಳಿ ಗುರುವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಮೃತರು ಮಾರುತಿ ಆಲ್ಟೊ ಕಾರಿನಲ್ಲಿ ಗುರುಗ್ರಾಮದಿಂದ ಫರಿದಾಬಾದ್ ಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಮೃತಪಟ್ಟವರೆಲ್ಲರೂ ಪಲ್ವಾಲ್ ನಿವಾಸಿಗಳಾಗಿದ್ದಾರೆ. ಎಲ್ಲರು ಕೂಡ ಅಪಘಾತ ನಡೆದ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಪುತಿನ್, ಜತಿನ್, ಆಕಾಶ್, ಸಂದೀಪ್, ಬಲ್ಜಿತ್ ಮತ್ತು ವಿಶಾಲ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪೊಲೀಸರು ಡಂಪರ್ ಅನ್ನು ವಶಪಡಿಸಿಕೊಂಡಿದ್ದಾರೆ ಆದರೆ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


