ಬೆಳಗಾವಿ: ಕಾರು ಮತ್ತು ಬೈಕ್ಗೆ, ಲಾರಿ ಡಿಕ್ಕಿ ಹೊಡೆದ ಪರಿಣಾಮ ಎಎಸ್ಐ ಪತ್ನಿ ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಬೂದಿಗೊಪ್ಪ ಕ್ರಾಸ್ನಲ್ಲಿ ನಡೆದಿದೆ.
ರುಕ್ಮಿಣಿ ಹಳಕಿ(48) ಅಕ್ಷತಾ ಹಳಕಿ(22), ಕಾರು ಚಾಲಕ ನಿಖಿಲ್ ಕದಂ(24), ಬೈಕ್ನಲ್ಲಿದ್ದ ವೃದ್ಧೆ ಹನುಮವ್ವಾ ಚಿಕ್ಕಲಕಟ್ಟಿ ಮೃತ ದುರ್ದೈವಿಗಳು. ಕುಡಚಿ ಪೊಲೀಸ್ ಠಾಣೆಯ ಎಎಸ್ಐ ವೈ.ಎಂ.ಹಲಕಿರವರ ಪತ್ನಿ ರುಕ್ಮಿಣಿ ಸಾವನ್ನಪ್ಪಿದ್ದಾರೆ.
ಬೆಳಗಾವಿ-ಬಾಗಲಕೋಟೆ ರಸ್ತೆಯ ಬೂದಿಗೊಪ್ಪ ಕ್ರಾಸ್ನಲ್ಲಿ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ಬೆಳಗಾವಿಯತ್ತ ಬರುತ್ತಿತ್ತು. ಈ ವೇಳೆ ಸ್ವಿಫ್ಟ್ ಡಿಸೈರ್ ಕಾರು ಮತ್ತು ಬೈಕ್ಗೆ ಡಿಕ್ಕಿ ಹೊಡೆದಿದೆ.
ಸ್ವಿಫ್ಟ್ ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ವೃದ್ಧೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಎಸ್‌ಪಿ ಡಾ.ಸಂಜೀವ್ ಪಾಟೀಲ್ ಭೇಟಿ ನೀಡಿದ್ದಾರೆ.ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy