ತುಮಕೂರು: ತುಮಕೂರಿನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಮೂರು ಕಡೆಯ ಫಾಮ್ ಹೌಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಿದೆ.
ಸಮಾಜ ಕಲ್ಯಾಣ ಇಲಾಖೆಯ ಜನರಲ್ ಮ್ಯಾನೇಜರ್ ಶ್ರೀನಿವಾಸ್ ಅವರಿಗೆ ಸೇರಿದ 3 ಫಾರ್ಮ್ ಹೌಸ್ ಗಳ ಮೇಲೆ ಎಸಿಬಿ ದಾಳಿ ನಡೆದಿದೆ.
ತುಮಕೂರಿನ ಕೌತಮಾರನಹಳ್ಳಿ ಕೊಟ್ಟೆಗೆ ಗೊಲ್ಲಹಳ್ಳಿ ಹಾಗೂ ಮಧುಗಿರಿ ತಾಲೂಕಿನ ಪುರವರ ಬಳಿಯಿರೋ ಎಜಿಓ ಫಾಮ್ ಹೌಸ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಳಗ್ಗೆ 7 ಗಂಟೆಯಿಂದ ಎಸಿಬಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಈ ಸಂಬಂಧ ಇನ್ನಷ್ಟು ಮಾಹಿತಿಗಳಿಗಾಗಿ ನಿರೀಕ್ಷಿಸುತ್ತಿದ್ದೇವೆ.
ವರದಿ: ರಾಜೇಶ್ ರಂಗನಾಥ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB