ಬೆಳಗಾವಿ: ಎಸ್ಸಿ, ಎಸ್ಟಿ ಜನಾಂಗಗಳ ಭೂಮಿ ಹಕ್ಕು ಹೋರಾಟಕ್ಕೆ ಮರು ಚಾಲನೆ ದೊರೆತಿದ್ದು, ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ಹಾಗೂ ದಲಿತ ಸಂಘಗಳ ಜಂಟಿ ಆಶ್ರಯದಲ್ಲಿ, ಡಾ.ವೆಂಕಟಸ್ವಾಮಿ ನೇತೃತ್ವದಲ್ಲಿ ಬೆಳಗಾವಿ ಚಲೋ ನಡೆಯಿತು.
ಇಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಪಾರ್ಕ್ ನಿಂದ ಮೆರವಣಿಗೆ ನಡೆಸಿ, ಕರ್ನಾಟಕ ಪರಿಶಿಷ್ಟ ಜಾತಿ, ಪಂಗಡಗಳ ಭೂ ಪರಭಾರೆ ನಿಷೇಧ(PTCL Act-1978) ಕಾಯ್ದೆಯ ಸಮಗ್ರ ತಿದ್ದುಪಡಿ ಮಸೂದೆ ಅಂಗೀಕರಿಸಲು ಒತ್ತಾಯಿಸಲಾಯಿತು.
ಬೃಹತ್ ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು, ಭೂಮಿ ಹಕ್ಕು ಕೇಳಿ ಘೋಷಣೆ ಕೂಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ಡಾ.ವೆಂಕಟಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಮೆರವಣಿಗೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಯಲದಬಾಗಿ ರಾಜಣ್ಣ ಮತ್ತು ಸಂಘದ ಪದಾಧಿಕಾರಿಗಳು ಭಾಗಿಯಾಗಿಯಾಗಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700