ಬೀದರ್ : ಅತಿವೃಷ್ಟಿ ಪೀಡಿತ ಪ್ರದೇಶದ ಪ್ರತಿ ಎಕರೆಗೆ ಸರಕಾರದಿಂದ 25 ಸಾವಿರ ರೂ. ಪರಿಹಾರ ಘೋಷಣೆ ಮಾಡಬೇಕು ಎಂದು ಶಾಸಕ ಪ್ರಭು ಚೌವ್ಹಾಣ್ ಒತ್ತಾಯಿಸಿದರು.
ಔರಾದ್ (ಬಿ) ಹಾಗೂ ಕಮಲಗನರ ತಾಲ್ಲೂಕಿನ ಗ್ರಾಮಗಳಾದ ನಾಮಾನಾಯಕ್ ತಾಂಡಾ, ಬಾವಲಗಾಂವ, ಚೊಂಡಿಮುಖೇಡ್, ಚಿಕ್ಲಿ(ಯು) ತಾಂಡಾ, ಅಕನಾಪೂರ, ಗಂಗನಬೀಡ, ದಾಬಕಾ, ಮುತಖೇಡ್, ನಂದಿ ಬಿಜಲಗಾಂವ, ಚಿಮ್ಮೇಗಾಂವ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಮಳೆಯಿಂದಾದ ಹಾನಿಯನ್ನು ಅವರು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಔರಾದ್ (ಬಿ) ತಹಶೀಲ್ದಾರ್ ಮಹೇಶ್ ಪಾಟೀಲ್, ಕಮಲನಗರ ತಹಶೀಲ್ದಾರ್ ಅಮಿತಕುಮಾರ್ ಕುಲಕರ್ಣಿ, ಔರಾದ ಹಾಗೂ ಕಮಲಗನರ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ ಪಾಟೀಲ್, ಹಣಮಂತ್ ಕೌಟಗೆ, ಪಂಚಾಯತ್ ರಾಜ್ ಇಲಾಖೆಯ ಎಇಇ ಸುನೀಲ್ ಚಿಲ್ಲರ್ಗೆ, ಲೋಕೋಪಯೋಗಿ ಇಲಾಖೆಯ ಎಇಇ ಪ್ರೇಮಸಾಗರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಇಇ ಮಾರುತಿ ರಾಠೋಡ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇಮಲಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜೆ.ರಂಗೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


