ಬೀದರ್ : ಶಾಲಾ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಲಸೂರ್ ಪೊಲೀಸ್ ಠಾಣೆ ವ್ಯಾಪ್ತಿಯ ಮೀರಖಲ್ ಗ್ರಾಮದ ಬಳಿ ನಡೆದಿದೆ.
ಮೀರಖಲ್ ತಾಂಡಾದ ನಿವಾಸಿ ದೀಪಕ್ ರಾಠೋಡ (31) ಮೃತಪಟ್ಟ ಬೈಕ್ ಸವಾರನಾಗಿದ್ದಾನೆ. ಬುಧವಾರ ರಾತ್ರಿ ಸುಮಾರು 9 ಗಂಟೆಗೆ ದೀಪಕ್ ಮೀರಖಲ್ ತಾಂಡಾದಿಂದ ಬರುತ್ತಿರುವಾಗ ಎದುರಿನಿಂದ ಬಂದ ಶಾಲಾ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಘಟನೆಯ ಸುದ್ದಿ ತಿಳಿದ ಹುಲಸೂರ್ ಠಾಣೆಯ ಪಿಎಸ್ ಐ ಶಿವಪ್ಪ ಮೇಟಿ ನೇತೃತ್ವದ ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕುರಿತು ಹುಲಸೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4