ಬೀದರ್: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಔರಾದ್ ತಾಲ್ಲೂಕಿನಲ್ಲೇ ಕಾರ್ಯನಿರ್ವಹಿಸುತ್ತಿರುವ ತಾಲ್ಲೂಕು ಆರೋಗ್ಯ ಅಧಿಕಾರಿಯನ್ನು ಕೂಡಲೇ ಬೇರೆಡೆ ವರ್ಗಾವಣೆ ಮಾಡಬೇಕು ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಯುವ ಘಟಕ ಆಗ್ರಹಿಸಿದೆ.
ಯುವ ಘಟಕದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಿಗೆ ಬರೆದ ಮನವಿ ಪತ್ರವನ್ನು ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಅವರಿಗೆ ಸಲ್ಲಿಸಿದರು.
ತಾಲ್ಲೂಕು ಆರೋಗ್ಯ ಅಧಿಕಾರಿ, ತಾಲ್ಲೂಕು ಮುಖ್ಯ ವೈದ್ಯಾಧಿಕಾರಿ, ಚಿಂತಾಕಿ, ವಡಗಾಂವ್ ಪಿಎಸಿ ಆಡಳಿತ ಅಧಿಕಾರಿ ಹುದ್ದೆಗಳನ್ನು ಒಬ್ಬರೇ ನಿರ್ವಹಿಸುತ್ತಿದ್ದಾರೆ ಎಂದು ದೂರಿದರು. ತಾಲ್ಲೂಕು ಆರೋಗ್ಯ ಅಧಿಕಾರಿ ಪಟ್ಟಣದಲ್ಲಿ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ತಮ್ಮ ಆಸ್ಪತ್ರೆಗೆ ಹೋಗಲು ತಿಳಿಸುತ್ತಿದ್ದಾರೆ ಎಂದು ಆಪಾದಿಸಿದರು.
ಔರಾದ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಂದು ಹೆರಿಗೆಗೆ ತಲಾ ರೂ. 4 ಸಾವಿರ ಪಡೆಯುತ್ತಿದ್ದಾರೆ. ತಾಲ್ಲೂಕು ಆರೋಗ್ಯ ಅಧಿಕಾರಿ ಗಮನಕ್ಕೆ ಇದ್ದರೂ ಅವರು ನಿರ್ಲಕ್ಷಿಸುತ್ತಿದ್ದಾರೆ ಎಂದು ಆಪಾದಿಸಿದರು.
ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ರಕ್ತ ಪರೀಕ್ಷೆಗೆ ಹಣ ಪಡೆಯಲಾಗುತ್ತಿದೆ ಶವ ಪರೀಕ್ಷೆ ಕೋಣೆಯಲ್ಲಿ ವಿದ್ಯುತ್ ಸಂಪರ್ಕ ಸ್ವಚ್ಛತೆ ಇಲ್ಲ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿ ಯುವ ಘಟಕದ ರಾಜ್ಯ ಅಧ್ಯಕ್ಷ ಲಕ್ಷ್ಮಣ ಎಸ್. ದೇವಕತೆ, ತಾಲ್ಲೂಕು ಅಧ್ಯಕ್ಷ ಸಚಿನ್ ಮೇತ್ರೆ, ಮುಖಂಡರಾದ ಜಾನಸನ್ ಘೋಡೆ, ರತ್ನದೀಪ್ ಕಸ್ತೂರೆ, ಬಬಲು, ಎಂ.ಡಿ.ಇರ್ಷಾದ್ ಮತ್ತಿತರರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC