ಬೀದರ್ : ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಭಾರತೀಯ ದಲಿತ್ ಪ್ಯಾಂಥರ್ ಮನವಿ ಮಾಡಿದೆ.
ಹುಮನಾಬಾದ್ ತಹಶೀಲ್ದಾರ್ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಕರ್ನಾಟಕ ಉಚ್ಚ ನ್ಯಾಯಾಲಯವು ಡಾ.ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಎಲ್ಲಾ ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಅಳವಡಿಸಬೇಕು ಎಂದು ಆದೇಶ ಹೊರಡಿಸಿದೆ. ಆದರೆ ಕೆಲವೊಂದು ನ್ಯಾಯಾಲಯಗಳಲ್ಲಿ ಡಾ.ಅಂಬೇಡ್ಕರ್ ಅವರ ಫೋಟೋ ಹಾಕಿರುವುದಿಲ್ಲ ಎಂದು ಆರೋಪಿಸಲಾಗಿದೆ.
ಉಚ್ಚ ನ್ಯಾಯಾಲಯದ ಆದೇಶದಂತೆ ಡಾ.ಅಂಬೇಡ್ಕರ್ ಅವರ ಫೋಟೋ ಎಲ್ಲಾ ನ್ಯಾಯಾಲಯಗಳ ಜೊತೆಗೆ ಹುಮನಾಬಾದ್ ನ್ಯಾಯಾಲಯದಲ್ಲಿಯೂ ಕೂಡ ಹಾಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಭಾರತೀಯ ದಲಿತ್ ಪ್ಯಾಂಥರ್ ನ ತಾಲೂಕು ಅಧ್ಯಕ್ಷ ಗಣಪತಿ ಅಷ್ಟೂರೆ, ಉಪಾಧ್ಯಕ್ಷ ಸಿದ್ದಾರ್ಥ್ ಜಾನವೀರ್, ಸುನಿಲಕುಮಾರ್ ಭೋಲಾ, ವಿಶಾಲ್ ಸಿಂಧನಕೇರಾ, ಗೌತಮ್ ಜಾನವೀರ್, ಅನಂತ್ ಮಾಳಗೆ, ವಿಠಲ್ ಶಿವನಾಯಕ್, ಆಕಾಶ್, ದಶರಥ್ ದಾಂಡೇಕರ್, ರಾಹುಲ್, ಗೌತಮ್ ಮೊಳಕೇರಾ, ಮಾಣಿಕ್ ಮೇಟಿ ಹಾಗೂ ಸಾಗರ್ ಸೇರಿದಂತೆ ಇತರರು ಇದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC