ಬೀದರ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಾಂಜ್ರಾ ನದಿಗೆ ಬಿದ್ದ ಘಟನೆ ಭಾಲ್ಕಿ ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ನಡೆದಿತ್ತು. ಗುರುವಾರ ಈ ಘಟನೆ ನಡೆದಿತ್ತು, ಇಂದು ಆತನ ಮೃತದೇಹ ಪತ್ತೆಯಾಗಿದೆ.
ಹಲಸಿತೂಗಾಂವ್ ಗ್ರಾಮದ ನಿವಾಸಿ ಪ್ರಭಾಕರ್ ಸೂರ್ಯವಂಶಿ (38) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕುಡಿದ ಮತ್ತಿನಲ್ಲಿ ಸೇತುವೆಯಿಂದ ಕೆಳಗೆ ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
ಗುರುವಾರ ಈ ಘಟನೆ ನಡೆದಿದ್ದು, ಶುಕ್ರವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC