ಬೀದರ್: ಬೀದರ್ ಜಿಲ್ಲಾಧಿಕಾರಿ ಕಚೇರಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಬೀದರ್ ನಗರದ ಚಿಕ್ಕಪೇಠ್‌ನಲ್ಲಿರುವ ಡಿಸಿ ಕಚೇರಿಗೆ ಇ–ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಸದ್ಯ ಡಿಸಿ ಕಚೇರಿಯಲ್ಲಿ ಪೋಲಿಸರು ಹೈಅಲರ್ಟ್ ಆಗಿದ್ದು, ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.
ಡಿಸಿ ಕಚೇರಿಯ ಸಿಬ್ಬಂದಿಯನ್ನು ಹೊರಗಡೆ ಕಳಿಸಿ, ಪೊಲೀಸರು ಕಚೇರಿಯನ್ನ ಸಂಪೂರ್ಣವಾಗಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಎಎಸ್ಪಿ ಚಂದ್ರಕಾಂತ್ ಪೂಜಾರಿ ಸೇರಿದಂತೆ ಹಲವು ಅಧಿಕಾರಿಗಳು ಆಗಮಿಸಿ, ಪರಿಶೀಲನೆ ಮಾಡುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


