ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಸಂತಪೂರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 161(ಎ) ರಲ್ಲಿ ಮಂಗಳವಾರ ಸಂಜೆ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಔರಾದ್ ಕಡೆಯಿಂದ ವೇಗವಾಗಿ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಗಿರಕಿ ಹೊಡೆದಿರುವ ಭಯಾನಕ ದೃಶ್ಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಪಘಾತದಲ್ಲಿ ತಾಲೂಕಿನ ಶೆಂಬೆಳ್ಳಿ ಗ್ರಾಮದ ಸಂತೋಷ ಮೇತ್ರೆ (35) ಎಂಬುವವರಿಗೆ ಕೈಕಾಲು, ತಲೆಗೆ ಗಂಭೀರ ಪೆಟ್ಟಾಗಿದ್ದು, ಅವರನ್ನು ಬೀದರ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಮುಂದುವರೆದಿದೆ
ಘಟನಾ ಸ್ಥಳಕ್ಕೆ ಸಂತಪೂರ ಪೊಲೀಸ್ ಠಾಣೆಯ ಪಿಎಸ್ ಐ ದಿನೇಶ ಎಂ.ಟಿ ಅವರು ಭೇಟಿ ನೀಡಿ ಪರಿಶೀಲಿಸಿ, ಕಾರು ಜಪ್ತಿ ಮಾಡಲಾಗಿದೆ. ಪ್ರಕರಣ ಇನ್ನೂ ದಾಖಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


