ಬೀದರ್: ಜಿಲ್ಲೆಯ ಹೋಳಿ ಹಾಗೂ ರಮಝಾನ್ ಹಬ್ಬದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆ ನಡೆಯದಂತೆ ಶಾಂತಿಯುತವಾಗಿ ಆಚರಿಸಬೇಕು ಎಂದು ಎಸ್ಪಿ ಪ್ರದೀಪ್ ಗುಂಟಿ ಹೇಳಿದರು
ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲಿ ಹಿಂದೂ ಮತ್ತು ಮುಸ್ಲಿಂ ಸಮಾಜದ ಮುಖಂಡರ ಸಭೆ ನಡೆಸಿ ಮಾತನಾಡಿದ ಅವರು, ಮಾ.2 ರಿಂದ 5ರವರಗೆ ಹೋಳಿ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಹಾಗೆಯೇ ಮಾ.21 ರಂದು ರಂಜಾನ್ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಬ್ಬಗಳ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪ್ರತಿಯೊಬ್ಬರು ಹಬ್ಬವನ್ನು ಸಂಭ್ರಮದಿಂದ ಆಚರಿಸಬೇಕು. ಯಾವುದೇ ಜಾತಿ, ಧರ್ಮದ ಜನರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬ ಆಚರಣೆಯ ಕಾಲಕ್ಕೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಶಾಂತಿಯುತವಾಗಿ ಆಚರಿಸಬೇಕು. ಹಬ್ಬ ಆಚರಣೆಯ ಕಾಲಕ್ಕೆ ಯಾವುದೇ ರೀತಿಯ ಅಹಿತಕರ ಘಟನೆ ಕಂಡು ಬಂದಲ್ಲಿ ತಕ್ಷಣ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಉಭಯ ಸಮಾಜದ ಮುಖಂಡರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಬೀದರ್ ಉಪವಿಭಾಗದ ಉಪಾಧೀಕ್ಷಕ ದೂದ್‌ಪೀರ್ ಹೆಚ್. ಮುಲ್ಲಾ ಹಾಗೂ ಮಹಾನಗರ ಪಾಲಿಕೆಯ ಅಧ್ಯಕ್ಷ ಮಹಮ್ಮದ್ ಗೌಸುದ್ದಿನ್ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿದ್ದರು
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


