ಬೀದರ್ : ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ, ಐ.ಪಿ.ಎಸ್, ಅವರ ನಿರ್ದೇಶನ ಮತ್ತು ಮಾರ್ಗದರ್ಶನದಂತೆ ಬೀದರ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ತಸ್ಲೀಮಾ ಅವರ ನೇತೃತ್ವದಲ್ಲಿ ರಸ್ತೆ ಸಂಚಾರ ನಿಯಮಗಳ ಬಗ್ಗೆ ವಾಹನ ಚಾಲಕರಿಗೆ ಅರಿವು ಮೂಡಿಸಲಾಯಿತು.
ಬೀದರ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಗವಾನ ಚೌಕ ದಿಂದ ಶಾಹಗಂಜ ಕಮಾನ ವರೆಗೆ ರಸ್ತೆ ದಟ್ಟಣೆ ಅಧಿಕ ಇದ್ದು, ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ರಸ್ತೆ ಸಂಚಾರ ಸುಗಮಗೊಳಿಸುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಅಧಿನಿಯಮದ ಅಡಿಯಲ್ಲಿ ಸಾರ್ವಜನಿಕರಿಗೆ ಒಂದು ಕಡೆ ಪಾರ್ಕಿಂಗ್ (One side parking) ಮಾಡಲು ತಿಳಿಸಿ ಹಾಗೂ ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಸಂಚಾರಿ ದಟ್ಟಣೆ ನೀಗಿಸುವ ನಿಟ್ಟಿನಲ್ಲಿ ಬೀದರ್ ನಗರ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿರವರು ಸದಾ ಪ್ರಯತ್ನಿಸುತ್ತಿದ್ದು, ಅವರ ಈ ಪ್ರಯತ್ನವು ಪ್ರಸಂಶನಿಯವಾಗಿದ್ದು, ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಸಹಕರಿಸಲು ಕೋರಲಾಗಿದೆ ಎಂದು ಪ್ರದೀಪ್ ಗುಂಟಿ, ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx