ಬೀದರ್ : ಕಮಲನಗರ್ ತಾಲ್ಲೂಕಿನ ಹೊಳ ಸಮುದ್ರ ಗ್ರಾಮದ ಬೀಜ ವಿತರಣಾ ಕೇಂದ್ರಕ್ಕೆ ಸೋಮವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈತರಿಗೆ ಬಿತ್ತನೆ ಬೀಜಗಳು ಸಮರ್ಪಕವಾಗಿ ನೀಡಲಾಗುತ್ತಿದೆ ಅಥವಾ ಇಲ್ಲವೇ ಎಂದು ಪರಿಶೀಲನೆ ನಡೆಸಿದರು.
ಸಂದರ್ಭದಲ್ಲಿ ಗ್ರಾಮದ ರೈತರೊಂದಿಗೆ ಚರ್ಚಿಸಿ ಮುಂಗಾರು ಕೃಷಿ ಚಟುವಟಿಕೆಗಳಿಗೆ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ವಿತರಿಸಲಾಗುವುದು ಎಂದು ತಿಳಿಸಿ, ರೈತರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಹೇಳಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW