ಬೀದರ್: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವಂತಹ ಪೋಸ್ಟ್ ಗಳನ್ನು ಹರಿಯಬಿಡುವವರಿಗೆ ಬೀದರ್ ಜಿಲ್ಲಾ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ.
ಜಿಲ್ಲೆಯ ಔರಾದ–ಬಿ ತಾಲೂಕಿನ ವ್ಯಕ್ತಿಯೊಬ್ಬ (ಆರೋಪಿ) ತನ್ನ ಮೊಬೈಲ್ ನಂಬರ್ ನಿಂದ ವಾಟ್ಸಾಪ್ ಗ್ರೂಪ್ ನಲ್ಲಿ ಒಂದು ಧರ್ಮದ ಬಗ್ಗೆ ಅಸಹನೆಯ ಭಾವ ಮೂಡಿಸುವಂತೆ, ಮುಂಬೈಯಲ್ಲಿ ಜೂನ್ ತಿಂಗಳಲ್ಲಿ ಜರುಗಿದ ಘಟನೆಯನ್ನು ಆ ಧರ್ಮಕ್ಕೆ ಸಂಬಂಧವಿಲ್ಲದ ವಿಡಿಯೋದೊಂದಿಗೆ ಸುಳ್ಳು ಸಂದೇಶ ಹರಡಿಸಿ ಸಮಾಜದಲ್ಲಿ ಸೌಹಾರ್ದತೆಗೆ ಧಕ್ಕೆ ತರುವಂತಹ ಹಳೆ ವಿಡಿಯೋವನ್ನು ಹರಿಬಿಟ್ಟಿದ್ದ. ಇವನ ವಿರುದ್ದ ಚಿಂತಾಕಿ ಪೊಲೀಸ್ ಠಾಣೆಯಲ್ಲಿ ಪಿ.ಎ.ಆರ್ ಸಂ: 22/2024, ಕಲಂ: 126 ಬಿ.ಎನ್.ಎಸ್.ಎಸ್ ಪ್ರಕಾರ ಕಾನೂನು ರಿತಿಯ ಕ್ರಮ ಕೈಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಯಬಿಟ್ಟು ಸಮಾಜದಲ್ಲಿ ಅಶಾಂತಿ ಕೆದಡುವಂತಹ ಪೋಸ್ಟ್ ಗಳು ಹರಿಯ ಬಿಡುವುದು ಕಾನೂನಿನ ಅಡಿಯಲ್ಲಿ ಅಪರಾಧವಾಗಿದ್ದು, ಅಂಥವರ ವಿರುದ್ಧ ಈಗಾಗಲೇ ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಿಸಿಕೊಳ್ಳಲಾಗುತ್ತಿದೆ. ಈ ಕುರಿತು ಜಿಲ್ಲಾ ಪೊಲೀಸರಿಂದ ಸಾಮಾಜಿಕ ಜಾಲತಾಣದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆದ್ದರಿಂದ ಯುವಕರು ಇಂತಹ ಪೋಸ್ಟ್ ಗಳನ್ನು ಹರಿಯಬಿಟ್ಟು ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದೆಂದು ಬೀದರ ಜಿಲ್ಲಾ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296