ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮ ಸಮೀಪದ ಕಾರಂಜಾ ಜಲಾಶಯ ಕಾಲುವೆಯಲ್ಲಿ ಬಿದ್ದು ತಂದೆ–ಮಗ ಮೃತಪಟ್ಟಿರುವ ದಾರುಣ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಹಳ್ಳಿಖೇಡ್ (ಬಿ) ಗ್ರಾಮ ನಿವಾಸಿಗಳಾದ ವಿಶ್ವನಾಥ್ (ಇಸಪ್ಪ) ಹೊಸಮನಿ (53), ಅವರ ಮಗ ಅಂಬರೀಶ್ ಹೊಸಮನಿ (23) ಎಂದು ಗುರುತಿಸಲಾಗಿದೆ.
ಬೀದರನಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಮರಳುವಾಗ ಅಂಬರೀಶ್ ಕೈಕಾಲು ತೊಳೆಯಲು ಕಾಲುವೆಗೆ ಇಳಿದಿದ್ದಾನೆ. ಈ ವೇಳೆ ಕಾಲು ಜಾರಿ ನೀರಿಗೆ ಬಿದ್ದಿದ್ದಾನೆ. ಮಗನನ್ನು ರಕ್ಷಿಸಲು ತಂದೆ ವಿಶ್ವನಾಥ್ ಕೂಡ ಕಾಲುವೆಗೆ ಇಳಿದಾಗ ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಧನ್ನೂರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಹಳ್ಳಿಖೇಡ(ಬಿ) ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಭಾಲ್ಕಿ ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


