ಬೀದರ್: ನಗರದ ಹೌಸಿಂಗ್ ಬೋರ್ಡ್ ಕಾಲೋನಿಯ ರಾಮ್ ಗಣೇಶ್ ಮಂಡಲ್ ವತಿಯಿಂದ ಗಣೇಶೋತ್ಸವದ ಸಂಭ್ರಮವು ಅತ್ಯಂತ ವಿಜೃಂಭಣೆಯಿಂದ ಪ್ರಾರಂಭವಾಯಿತು. ಉತ್ಸವದ ಮೊದಲ ದಿನವಾದ ಇಂದು ಬೃಹತ್ ಹಾಗೂ ಆಕರ್ಷಕ ಗಾತ್ರದ ಗಣಪತಿಯನ್ನು ವಿಧ್ಯುಕ್ತವಾಗಿ ಪ್ರತಿಷ್ಠಾಪಿಸಿ, ವಿಶಿಷ್ಟ ಪೂಜೆಗಳನ್ನು ನೆರವೇರಿಸಲಾಯಿತು.
ಮಂಡಳದಿಂದ ಪ್ರತಿಷ್ಠಾಪಿಸಿರುವ ಈ ಬೃಹತ್ ಗಾತ್ರದ ಗಣಪತಿಯು ಕಣ್ಣಿಗೆ ಆಕರ್ಷಕವಾಗಿ ಕಾಣುತ್ತಿದ್ದು, ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಈ ಅದ್ಭುತ ಪ್ರತಿಮೆಯನ್ನು ಕಣ್ತುಂಬಿಕೊಳ್ಳಲು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಸಂಜೆ 8:00 ಗಂಟೆಗೆ ಗಣೇಶನ ಮೊದಲ ದಿನದ ಧಾರ್ಮಿಕ ಪೂಜಾ ವಿಧಿವಿಧಾನಗಳು ಆರಂಭಗೊಂಡು ಭಕ್ತಿಭಾವದಿಂದ ನೆರವೇರಿದವು. ಪೂಜೆಯ ನಂತರ ಆಗಮಿಸಿದ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಸಮರ್ಪಿಸಲಾಯಿತು. ಉತ್ಸವದ ಮುಂದುವರಿದ ಭಾಗವಾಗಿ, ಇನ್ನುಳಿದ ಐದು ದಿನಗಳ ಕಾಲ ಪ್ರತಿದಿನ ಸಂಜೆ ವಿಶೇಷ ಪೂಜೆಯ ನಂತರ ಭಕ್ತರಿಗೆ ಪ್ರಸಾದ ವಿತರಣೆ ಮಾಡಲು ಕಮಿಟಿಯ ಸದಸ್ಯರು ಸರ್ವಾನುಮತದಿಂದ ತೀರ್ಮಾನ ಕೈಗೊಂಡಿದ್ದಾರೆ.
ಬೀದರ್ ನಗರದ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ವಿಘ್ನಹರ್ತ ಶ್ರೀ ಗಣೇಶನ ಆಶೀರ್ವಾದ ಪಡೆದುಕೊಳ್ಳಬೇಕಾಗಿ ರಾಮ್ ಗಣೇಶ್ ಮಂಡಲದ ಪದಾಧಿಕಾರಿಗಳು ಹಾಗೂ ಸಮಿತಿಯ ಸದಸ್ಯರು ಹಾರ್ದಿಕವಾಗಿ ಆಹ್ವಾನಿಸಿದ್ದಾರೆ.
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
