ಬೀದರ್: ಮಾರ್ಚ್ ತಿಂಗಳಲ್ಲಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ನಡೆದ ಜೂಜಾಟ, ಮಟ್ಕಾ ಕ್ರಿಕೆಟ್ ಬೆಟ್ಟಿಂಗ್, ಗಾಂಜಾ, ಪಡಿತರ ಅಕ್ಕಿ ಅಕ್ರಮ ಸಂಗ್ರಹ, ಅಕ್ರಮ ಮದ್ಯ ಮಾರಾಟ ಕುರಿತು 189 ಪ್ರಕರಣಗಳನ್ನು ದಾಖಲಿಸಿ ಒಟ್ಟು 431 ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ ಗುಂಟಿ ತಿಳಿಸಿದ್ದಾರೆ
ಬಂಧಿತರಿಂದ ₹35.34 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸುಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಕರಣಗಳ ವಿವರ:
22 ಜೂಜಾಟ ಪ್ರಕರಣಗಳಲ್ಲಿ 227 ಆರೋಪಿತರನ್ನು ಬಂಧಿಸಿ ₹3.03 ಲಕ್ಷ ,11 ಕ್ರಿಕೆಟ್ ಬೆಟ್ಟಿಂಗ್ ಪ್ರಕರಣಗಳಲ್ಲಿ 19 ಆರೋಪಿಗಳನ್ನು ಬಂಧಿಸಿ ₹62.70 ಸಾವಿರ,49 ಮಟ್ಕಾ ಪ್ರಕರಣಗಳಲ್ಲಿ 65 ಆರೋಪಿಗಳನ್ನು ಬಂಧಿಸಿ ₹78.34 ಸಾವಿರ, ಪಡಿತರ ಅಕ್ಕಿ ಅಕ್ರಮ ಸಂಗ್ರಹ 7 ಪ್ರಕರಣಗಳಲ್ಲಿ 11 ಆರೋಪಿತರನ್ನು ಬಂಧಿಸಿ ₹6.43 ಲಕ್ಷ. ಡ್ರಗ್ಸ್ 3 ಪ್ರಕರಣಗಳಲ್ಲಿ 4 ಆರೋಪಿತರನ್ನು ಬಂಧಿಸಿ 22.51 ಲಕ್ಷ.ಹಾಗೂ 97 ಅಬಕಾರಿ ಪ್ರಕರಣಗಳಲ್ಲಿ 105 ಆರೋಪಿಗಳನ್ನು ಬಂಧಿಸಿ ₹1.95 ಲಕ್ಷ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಆರೋಪಿಗಳು ಪದೇ ಪದೇ ಕಾನೂನು ವಿರುದ್ಧ ಚಟುವಟಿಕೆಗಳಲ್ಲಿ ತೊಡಗಿದರೆ ಅಂತಹ ಆರೋಪಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಲಾಗುವುದು ಎಂದು ಎಸ್ಪಿ ಪ್ರದೀಪ ಗುಂಟಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW