ಬೀದರ್: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸಾರಿಗೆ ಬಸ್ ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
ಬೀದರ್ ನಿಂದ ಔರಾದ್ ಗೆ ಪ್ರಯಾಣಿಸುತ್ತಿದ್ದ ಬಸ್, ಔರಾದ್ ತಾಲ್ಲೂಕಿನ ಕಪ್ಪಿಕೆರೆ ಗ್ರಾಮದ ಬಳಿ ತೆರಳುತ್ತಿದ್ದಾಗ ಬೆಂಕಿ ಕಾಣಿಸಿಕೊಂಡಿದೆ ಮೊದಲಿಗೆ ಎಂಜಿನ್ ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು ಬಳಿಕ ಇಡೀ ಬಸ್ ಗೆ ಬೆಂಕಿ ವ್ಯಾಪಿಸಿದೆ ಬಸ್ ಸಂಪೂರ್ಣವಾಗಿ ಸುಟ್ಟು ಹೋಗಿದೆ.
ಬಸ್ ನಲ್ಲಿ ಸುಮಾರು 25 ಮಂದಿ ಪ್ರಯಾಣಿಕರಿದ್ದರು ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಬಸ್ ನಿಲ್ಲಿಸಿದ್ದು ಪ್ರಯಾಣಿಕರನ್ನು ಬಸ್ ನಿಂದ ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ ಬಸ್ ನಲ್ಲಿದ್ದ ಯಾರಿಗೂ ಯಾವುದೇ ಗಾಯಗಳಾಗಿಲ್ಲ ಎಲ್ಲರೂ ಸುರಕ್ಷಿತವಾಗಿದ್ದಾರೆ .
ಔರಾದ್ ಅಗ್ನಿಶಾಮಕ ವಾಹನ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಬೆಂಕಿ ನಂದಿಸಿದ್ದಾರೆ. ಬೀದರ್ ಜಿಲ್ಲೆಯಲ್ಲಿ 30 ರಿಂದ 40 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ತಾಪಮಾನ ಉಷ್ಣತೆಯಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4