ಹೈದರಾಬಾದ್: ಬೀದರ್ ಜಿಲ್ಲೆಯ ರಾಷ್ಟ್ರೀಯ ಭೀಮ್ ರಾಜ್ ಸೇನಾ ಸಂಘಟನೆಯ ಅಧ್ಯಕ್ಷರಾದ ರಾಜೇಶ್ ಕಾಂಬ್ಳೆ ಅವರನ್ನು ರಮೇಶ್ ಒಡೆಯರ್ ಅವರ ನೇತೃತ್ವದಲ್ಲಿ ಇತ್ತೀಚೆಗೆ ಹೈದರಾಬಾದ್‌ನಲ್ಲಿ ಭೇಟಿಯಾಗಿ ಹೂಮಾಲೆ ಹಾಕಿ ಅಭಿನಂದಿಸಿ, ಸನ್ಮಾನಿಸಲಾಯಿತು.
ಹಿರಿಯ ರಾಜಕಾರಣಿ ಬಿ.ಕೆ. ಹರಿಪ್ರಸಾದ್ ಅವರ ಶಿಷ್ಯ ಹಾಗೂ ರಾಷ್ಟ್ರೀಯ ಅಹಿಂದ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ರಮೇಶ್ ಒಡೆಯರ್ ಅವರ ನೇತೃತ್ವದ ನಿಯೋಗವು ಹೈದರಾಬಾದ್ ಗೆ ತೆರಳಿ ಈ ಗೌರವ ಸಮರ್ಪಣೆ ಮಾಡಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, “ಶ್ರೀ ರಾಜೇಶ್ ಕಾಂಬ್ಳೆ ಅವರ ಸರಳತೆ, ಕಾರ್ಯಕ್ಷಮತೆ ಹಾಗೂ ಜನಪರ ಕಾಳಜಿ ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕವಾಗಿದೆ. ಸಾರ್ವಜನಿಕ ಜೀವನದಲ್ಲಿ ಸದಾ ಸಕ್ರಿಯರಾಗಿ ಜನಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರಿಗೆ ಭಗವಾನ್ ಬುದ್ಧನು ಉತ್ತಮ ಆಯುಷ್ಯ, ಆರೋಗ್ಯ ಮತ್ತು ಇನ್ನಷ್ಟು ಜನಸೇವೆ ಮಾಡಲು ಹೆಚ್ಚಿನ ಶಕ್ತಿಯನ್ನು ನೀಡಲಿ” ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ರಮೇಶ್ ಒಡೆಯರ್, ಕುರುಬರ ರಾಮಣ್ಣ ಹಾಗೂ ಅವರ ಸಂಗಡಿಗರು ಉಪಸ್ಥಿತರಿದ್ದರು.
ವರದಿ: ಮಂಜುಶ್ರವಣೂರು, ಹೊಳೆನರಸೀಪುರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
