ಬೀದರ್: ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯ ಆರೋಪದ ಮೇಲೆ ಹುಮನಾಬಾದ್ ತಾಲೂಕಿನ ಸಿಂಧನಕೇರಾ ಗ್ರಾಮ ಪಂಚಾಯಿತಿ ಪಿಡಿಒ ಸುಗಂಧ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೋಮವಾರ ಆದೇಶ ಹೊರಡಿಸಿದ್ದಾರೆ.
ಸಿಂಧನಕೇರಾ ಗ್ರಾಮ ಪಂಚಾಯಿತಿಯಲ್ಲಿ ನಿರ್ವಹಿಸುತ್ತಿದ್ದ ಕಂಪ್ಯೂಟರ್ ಆಪರೇಟರ್ ಸುಭಾಷ ಅವರ ಮೇಲೆ ಪಿಡಿಒ ಸುಗಂಧ ಅವರು ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ ಹೆಚ್ಚಿನ ಒತ್ತಡ ಹಾಕಿದ್ದರಿಂದಾಗಿ ಅವರು ಸುಭಾಷ್ ಅವರು ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಪಿಡಿಒ ಸುಗಂಧ ಅವರ ವಿರುದ್ಧ ಚಿಟಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಾದ ದಿನದಿಂದ ಪಿಡಿಒ ಅವರು ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಅನಧಿಕೃತವಾಗಿ ಗೈರು ಹಾಜರಾಗಿರುವುದು ಕಂಡು ಬಂದಿದೆ. ಈ ಕುರಿತು ಹುಮನಾಬಾದ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸತ್ಯಾಸತ್ಯತೆಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಿದ್ದರು
ಕರ್ತವ್ಯದಲ್ಲಿ ತೀವ್ರ ನಿರ್ಲಕ್ಷ್ಯತನ ಹಾಗೂ ನಿಷ್ಕಾಳಜಿತನ ತೋರುತ್ತಿರುವುದರಿಂದ ಹಾಗೂ ಮೇಲಾಧಿಕಾರಿಗಳ ಅನುಮತಿ ಇಲ್ಲದೇ ಕಚೇರಿ ಕೆಲಸಗಳಿಗೆ ಅನಧಿಕೃತವಾಗಿ ಗೈರು ಹಾಜರಾಗಿರುವ ಆರೋಪ ಕಂಡು ಬಂದಿದ್ದು ಇಲಾಖಾ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಸಿಇಒ ಡಾ. ಗಿರೀಶ ಬದೋಲೆ ಆದೇಶದಲ್ಲಿ ತಿಳಿಸಿದ್ದಾರೆ
ವರದಿ: ಅರವಿಂದ ಮಲ್ಲೀಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW