ಬೀದರ್: ರಾಜ್ಯ ಸರ್ಕಾರದಿಂದ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ವೇಳೆ ನೆಟ್ ವರ್ಕ್ ಸಮಸ್ಯೆ ಎದುರಿಸಿದ ಶಿಕ್ಷಕರೊಬ್ಬರು ಮರ ಹತ್ತಿದ ಘಟನೆ ಬಸವಕಲ್ಯಾಣ ತಾಲ್ಲೂಕಿನ ಮಿರಖಲ್ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಮೀಕ್ಷೆಗೆ ನಿಯುಕ್ತಿಗೊಂಡಿದ್ದ ಮಿರಖಲ್ ಗ್ರಾಮದ ಸರ್ಕಾರಿ ಶಾಲಾ ಶಿಕ್ಷಕ ಗೋವಿಂದ ಮಹಾರಾಜ ನೆಟ್‌ವರ್ಕ್‌ಗಾಗಿ ಮರ ಹತ್ತಿದ್ದಾರೆ. ಆದರೆ, ಮರ ಹತ್ತಿದ ನಂತರವೂ ಸರಿಯಾದ ನೆಟ್‌ವರ್ಕ್ ಸಿಗದೆ ಮರದಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ.
ಸೆ.22ರಿಂದ ರಾಜ್ಯ ಸರ್ಕಾರ ಸಮೀಕ್ಷೆ ಆರಂಭಿಸಿದ್ದು, ಗಡಿ ಭಾಗದಲ್ಲಿರುವ ಮಿರಖಲ್ ಗ್ರಾಮದಲ್ಲಿ ನೆಟ್ ವರ್ಕ್ ಸಮಸ್ಯೆ ಹೆಚ್ಚಾಗಿ ಇರುವುದರಿಂದ ಅವರು ಮರಕ್ಕೆ ಹತ್ತಿದ್ದಾರೆ ಎಂದು ತಿಳಿದು ಬಂದಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC