ಬೀದರ್: ಶಾಲಾ ವಿದ್ಯಾರ್ಥಿಗಳಿಗೆ ತುರ್ತು ಸಂದರ್ಭಗಳಲ್ಲಿ ತಕ್ಷಣ ಸಂಪರ್ಕಿಸಲು ಮಕ್ಕಳ ಸಹಾಯವಾಣಿ, ಪೊಕ್ಸೊ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸುವ ನಿಟ್ಟಿನಲ್ಲಿ ಚಿಂತಾಕಿ ಪೊಲೀಸರು ತೆರೆದ ಮನೆ ಕಾರ್ಯಕ್ರಮದ ಮೂಲಕ ಜಾಗೃತಿ ಮೂಡಿಸಿದರು.
ಚಿಂತಾಕಿ ಪೊಲೀಸ್ ಠಾಣೆಯ ಪಿಎಸ್ ಐ ಬಸವರಾಜ ಕೋಟೆ ತಮ್ಮ ಠಾಣೆಯ ಸಿಬ್ಬಂದಿರವರೊಂದಿಗೆ ಶ್ರೀ ಗುರುಪಾದಪ್ಪ ನಾಗಮಾರಪಳ್ಳಿ ಪ್ರೌಢ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಚಿಂತಾಕಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ರವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx