ಔರಾದ್: ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮುಸ್ತಾಪೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಸುಣ್ಣ-ಬಣ್ಣ ಹಚ್ಚಿ ಹಲವು ವರ್ಷಗಳು ಕಳೆದಿದ್ದು, ಶಾಲಾ ಕಟ್ಟಡವು ಕಳೆಗುಂದಿದೆ. ಕೂಡಲೇ ಶಾಲಾ ಕಟ್ಟಡಕ್ಕೆ ಬಣ್ಣ ಬಳಸಿ ಸುಂದರಗೊಳಿಸುವಂತೆ ಒತ್ತಾಯಿಸಿ ಇಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ (PDO) ಮನವಿ ಪತ್ರ ಸಲ್ಲಿಸಲಾಯಿತು.
ಈ ಮನವಿ ಸಲ್ಲಿಕೆ ಕಾರ್ಯದ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡರಾದ ಲಖನ್ ಲಾಧೇಕರ್, ಸಮಾಜ ಸೇವಕರಾದ ಶರಣಬಸಪ್ಪ ಕಾರಮುಂಗೆ, ಸುನಿಲ್ ಪಾಂಡ್ರೆ, ಭರತ್ ರೂಪನರ, ಮಹಾದೇವ್ ಉಪ್ಪಾರ್, ಹಣಮಂತ ಕಿವುಂಡೆ ಸೇರಿದಂತೆ ಮುಂತಾದ ಪ್ರಮುಖರು ಉಪಸ್ಥಿತರಿದ್ದರು.
ಶಾಲೆಯ ಹದಗೆಟ್ಟ ವಾತಾವರಣವು ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಶಾಲೆಯ ಜೀರ್ಣೋದ್ಧಾರಕ್ಕೆ ಮುಂದಾಗಬೇಕು ಎಂದು ಗ್ರಾಮಸ್ಥರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
