nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ

    October 4, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026
    Facebook Twitter Instagram
    ಟ್ರೆಂಡಿಂಗ್
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ
    • ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ
    • ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ
    • ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ
    • ಮಧುಗಿರಿ: ಅಕ್ರಮ ಮದ್ಯ ಮಾರಾಟ – ಅಬಕಾರಿ ಇಲಾಖೆಯಿಂದ ದಿಢೀರ್ ದಾಳಿ, ಮದ್ಯ ಜಪ್ತಿ!
    • ಉಪ್ಪಿಟ್ಟು ರವೆ, ಇಡ್ಲಿ ರವೆ ಒಂದೇ ಅಲ್ಲ! ಎರಡರ ನಡುವಿನ ವ್ಯತ್ಯಾಸವೇನು ಗೊತ್ತಾ?
    • ಶಿವನ ಕೊರಳಿನಿಂದ ಬುದ್ಧನ ಧ್ಯಾನದವರೆಗೆ ನಾಗರಹಾವಿನ ನಂಟೇಕೆ? ಹಿಂದೂ, ಬೌದ್ಧ, ಜೈನ ಧರ್ಮಗಳಲ್ಲಿರುವ ನಿಗೂಢ ನಂಬಿಕೆಯ ಕಥೆ ಇಲ್ಲಿದೆ!
    • ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ
    ಜಿಲ್ಲಾ ಸುದ್ದಿ October 4, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    By Ganesh TumkuruOctober 4, 2026No Comments2 Mins Read
    bidar

    ಬೀದರ್: ಜಿಲ್ಲೆಯಲ್ಲಿ ಅಕ್ರಮವಾಗಿ ಪಿಸ್ತೂಲ್‌ ಹಾಗೂ ಜೀವಂತ ಗುಂಡುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ದೊಡ್ಡ ಜಾಲವೊಂದನ್ನು ಬೀದರ್‌ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆ ನಡೆಸಿದ ಪೊಲೀಸರು ಮುಖ್ಯ ಆರೋಪಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಅವರಿಂದ ಮಾರಕ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

    ಜುಲೈ 15ರಂದು ಬೀದರ್ ನಗರದ ಹೊರವಲಯದ ಜ್ಞಾನಸುಧಾ ಶಾಲೆ ಸಮೀಪದ ರಿಂಗ್‌ ರಸ್ತೆಯಲ್ಲಿ ಪೊಲೀಸರು ದಾಳಿ ನಡೆಸಿ ಅಮನ್‌ ಸಿಂಗ್‌ ಹಾಗೂ ವೆಂಕಟೇಶ ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದರು. ಆ ಸಂದರ್ಭದಲ್ಲಿ 5 ಪಿಸ್ತೂಲ್‌, 26 ಜೀವಂತ ಗುಂಡುಗಳು, 10 ಎಂ.ಟಿ.ಕೇಸ್‌, 5 ತಲ್ವಾರ್‌‌ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಸೇರಿದಂತೆ ಒಟ್ಟು ₹6.73 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೆ, ಅಂದು ಪ್ರಮುಖ ಆರೋಪಿ ಬಲಬೀರ್‌ ಸಿಂಗ್‌ ತಲೆಮರೆಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದ.

    ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯ ಬಗ್ಗೆ ಖಚಿತ ಮಾಹಿತಿ ಕಲೆಹಾಕಿದ ಪೊಲೀಸರ ವಿಶೇಷ ತಂಡ, ಮಹಾರಾಷ್ಟ್ರದ ನಾಂದೇಡ್‌ ಮೂಲದ ಬಲಬೀರಸಿಂಗ್‌ ಅಲಿಯಾಸ್‌ ಶೇರಾ ಜಾಧವ್‌ನನ್ನು ಹೈದರಾಬಾದ್‌ನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿ ಬಲಬೀರ್‌ ಸಿಂಗ್‌ ಜೊತೆಗೆ ಆನಂದಕುಮಾರ, ಈಶ್ವರ ಹಾಗೂ ಅಶ್ವಿನ್‌ ಎಂಬ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಒಟ್ಟು ನಾಲ್ವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಬಂಧಿತರಿಂದ ಒಟ್ಟು 5 ಪಿಸ್ತೂಲ್‌ ಹಾಗೂ 12 ಜೀವಂತ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

    ಪ್ರಮುಖ ಆರೋಪಿ ಬಲಬೀರಸಿಂಗ್‌ ಅಲಿಯಾಸ್‌ ಶೇರಾ ಜಾಧವ್‌ ವಿರುದ್ಧ ಮಹಾರಾಷ್ಟ್ರದ ಇತವಾರ್‌, ಲಿಂಬೆಗಾಂವ್‌ ಹಾಗೂ ನಾಂದೇಡ್‌ ಗ್ರಾಮೀಣ ಪೊಲೀಸ್‌ ಠಾಣೆಗಳಲ್ಲಿ ಪ್ರತ್ಯೇಕ 5 ಗಂಭೀರ ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ. ಈ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ ಗುಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಈ ಕಾರ್ಯಾಚರಣೆಯನ್ನು ಡಿವೈಎಸ್ಪಿ ಎನ್.ಡಿ. ಸನದಿ ಅವರ ನೇತೃತ್ವದಲ್ಲಿ, ಸೆನ್ (CEN) ಠಾಣೆ ಸಿಪಿಐ ಸಂತೋಷ್ ತಟ್ಟೆಪಳ್ಳಿ ಹಾಗೂ ಸಿಬ್ಬಂದಿಗಳಾದ ಎಮ್.ಡಿ. ಆರಿಫ್, ಪ್ರಶಾಂತ್, ನಾಗೇಶ, ಗಂಗಾಧರ, ಸೂರ್ಯಕಾಂತ, ಅನಿಲ್, ಹಣಮಂತ, ಮಂಜುನಾಥ, ರಮೇಶ, ಗುರುನಾಥ, ಶೇಖ ಮೊದಿನ್, ರಾಜಕುಮಾರ ದಾನಾ, ರಮೇಶ, ಉಮೇಶ ಮತ್ತು ರಾಜಕುಮಾರ ಅವರನ್ನೊಳಗೊಂಡ ತಂಡ ಯಶಸ್ವಿಗೊಳಿಸಿದೆ.

    ವರದಿ: ಅರವಿಂದ ಮಲ್ಲೀಗೆ, ಬೀದರ್


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

    Ganesh Tumkuru
    • Website

    Related Posts

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ

    October 4, 2026

    ಕೊರಟಗೆರೆ: ತಾಲೂಕಿನಲ್ಲಿ ಹೈನುಗಾರಿಕೆ ಮಾಡುವ ರೈತರನ್ನು ಆರ್ಥಿಕವಾಗಿ ಪ್ರಬಲಗೊಳಿಸಲು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ, ಕರ್ನಾಟಕ…

    ಪಾಕಿಸ್ತಾನದ ಉಗ್ರ ಸಂಘಟನೆಗಳೊಂದಿಗೆ ನಂಟು ಆರೋಪ: ಬೀದರ್ ಜಿಲ್ಲೆಯ ಭಾಲ್ಕಿ ಮೂಲದ ಯುವಕನ ಬಂಧನ

    October 4, 2026

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಗ್ರಾಮಾಂತರ ಮಕ್ಕಳ ಶಿಕ್ಷಣವೇ ಶಿವಕುಮಾರ ಶ್ರೀಗಳ ಕನಸಾಗಿತ್ತು: ಶ್ರೀ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ

    October 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.