ಬೀದರ್: ಜಿಲ್ಲೆಯ ಔರಾದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತಾಲೂಕು ಘಟಕದಿಂದ ಔರಾದ್ ಪಟ್ಟಣದ ತಾಲೂಕು ಪಂಚಾಯತ ಸಭಾಭವನದಲ್ಲಿ ಜು.31ರಂದು ಬೆಳೆಗ್ಗೆ 10:30ಕ್ಕೆ ಪತ್ರಿಕಾ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ತಾಲೂಕು ಅಧ್ಯಕ್ಷ ಶಿವಾನಂದ ಮೊಕ್ತೆದಾರ್ ತಿಳಿಸಿದ್ದಾರೆ.
ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠ ಸಂಸ್ಥಾನದ ಶ್ರೀ ಗುರುಬಸವ ಪಟ್ಟದ್ದೇವರು ಸಾನ್ನಿಧ್ಯ ವಹಿಸಲಿದ್ದಾರೆ.
ಶಾಸಕ ಪ್ರಭು ಚವ್ಹಾಣ್ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಎಂಎಲ್ಸಿ ವಿಜಯ್ ಸಿಂಗ್ ಸಸಿ ನೆಡುವ ಮೂಲಕ ಚಾಲನೆ ನೀಡುವರು. ಪತ್ರಕರ್ತ ದೇವಯ್ಯ ಗುತ್ತೇದಾರ್ ಉಪನ್ಯಾಸ ನೀಡುವರು. ಸಂಘದ ಜಿಲ್ಲಾಧ್ಯಕ್ಷ ಡಿ.ಕೆ. ಗಣಪತಿ ಅಧ್ಯಕ್ಷತೆ ವಹಿಸಲಿದ್ದಾರೆ. ಡಿವೈಎಸ್ಪಿ ಶಿವಾನಂದ ಪವಾಡ ಶೆಟ್ಟಿ. ತಹಶೀಲ್ದಾರ್ ಮಹೇಶ್ ಪಾಟೀಲ್, ತಾಪಂ ಇಒ ಶಿವಕುಮಾರ್ ಘಾಟೆ, ಸಿಪಿಐ ರಘುವೀರ ಸಿಂಗ್ ಠಾಕೂರ್, ಶರಣಪ್ಪ ಚಿಟಮೇ, ಶಿವಕುಮಾರ ಸ್ವಾಮಿ, ನಾಗಶೆಟ್ಟಿ ಧರಂಪುರೆ, ಪೃಥ್ವಿರಾಜ್ ಎಸ್. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಶಿವಾನಂದ ಮೊಕ್ತೆದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


