ಬೀದರ್: ಎಟಿಎಂಗೆ ಹಣ ತುಂಬಿಸುವ ಬ್ಯಾಂಕ್ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ ಹಣದೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಹೈದರಾಬಾದ್ನಲ್ಲಿ ಪತ್ತೆಯಾಗಿದ್ದಾರೆ.
ಬೀದರ್ ನಲ್ಲಿ ಹಣ ದೋಚಿಕೊಂಡು ಬಂದಿದ್ದ ಆರೋಪಿಗಳು ಹೈದರಾಬಾದ್ ಮೂಲಕ ಛತ್ತೀಸ್ಗಢದ ರಾಯಪುರಕ್ಕೆ ಪರಾರಿಯಾಗಲು ಪ್ಲಾನ್ ಮಾಡಿದ್ದರು. ಖಾಸಗಿ ಬಸ್ ಟ್ರಾವೆಲ್ ನಲ್ಲಿ ಟಿಕೆಟ್ ಬುಕ್ ಮಾಡಿದ್ದ ಆರೋಪಿಗಳ ಲಗೇಜ್ ಅನ್ನು ಬಸ್ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ. ಬ್ಯಾಗ್ ಗಳಲ್ಲಿ ಭಾರೀ ಪ್ರಮಾಣದಲ್ಲಿ ಹಣ ಕಂಡು ಬಂದಿದ್ದು, ಇದನ್ನು ಸಿಬ್ಬಂದಿ ಪ್ರಶ್ನಿಸಿದಾಗ ಅವರಿಗೇ ಸ್ವಲ್ಪ ಹಣ ನೀಡಲು ಮುಂದಾಗಿದ್ದಾರೆ. ಈ ವೇಳೆ ಅಲ್ಲೇ ಇದ್ದ ಕರ್ನಾಟಕ ಪೊಲೀಸರು ಗಮನಿಸಿದ್ದಾರೆ.
ಪೊಲೀಸರನ್ನು ಕಂಡ ತಕ್ಷಣ ಎಚ್ಚೆತ್ತುಕೊಂಡ ದರೋಡೆಕೋರರು, ಟ್ರಾವೆಲ್ ಏಜೆನ್ಸಿ ಮ್ಯಾನೇಜರ್ ಹೊಟ್ಟೆಗೆ ಫೈರ್ ಮಾಡಿದ್ದಾರೆ. ಸ್ಥಳದಲ್ಲಿದ್ದ ಮತ್ತೊಬ್ಬರಿಗೂ ಗಾಯವಾಗಿದೆ. ಗುಂಡಿನ ಶಬ್ದ ಕೇಳಿ ಜನರು ಓಡಲು ಆರಂಭಿಸಿದಾಗ ಜನರ ಗುಂಪಿನಲ್ಲಿ ದರೋಡೆಕೋರರು ಎಸ್ಕೇಪ್ ಆಗಿದ್ದಾರೆ. ಈ ವೇಳೆ ಹರಸಾಹಸಪಟ್ಟು ಒಬ್ಬ ದರೋರೆಕೋರನನ್ನು ಪೊಲೀಸರು ಬಂಧಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx