ಬೀದರ್: ಜಿಲ್ಲೆಯ 37 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯು ಗಣಿತ, ಶಿಕ್ಷಣಶಾಸ್ತ್ರ ಹಾಗೂ ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆಗಳು ಸೋಮವಾರ ಸುಸೂತ್ರವಾಗಿ ನಡೆದವು.
ಒಟ್ಟು 16,545 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 15,751 ವಿದ್ಯಾರ್ಥಿಗಳು ಪರೀಕ್ಷೆ ಬರೆದರು ಒಟ್ಟು 794 ವಿದ್ಯಾರ್ಥಿಗಳು ಗೈರು ಹಾಜರಾದರು.
ಗಣಿತ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 13,222 ವಿದ್ಯಾರ್ಥಿಗಳ ಪೈಕಿ 12,792 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು. 430 ವಿದ್ಯಾರ್ಥಿಗಳು ಗೈರಾಗಿದ್ದರು.
ಶಿಕ್ಷಣಶಾಸ್ತ್ರ ವಿಷಯಕ್ಕೆ ನೋಂದಾಯಿಸಿಕೊಂಡಿದ್ದ 649 ವಿದ್ಯಾರ್ಥಿಗಳ ಪೈಕಿ 551 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 98 ವಿದ್ಯಾರ್ಥಿಗಳು ಗೈರಾಗಿದ್ದರು. ವ್ಯವಹಾರ ಅಧ್ಯಯನ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 2,674 ವಿದ್ಯಾರ್ಥಿಗಳ ಪೈಕಿ 2,408 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದರು.266 ವಿದ್ಯಾರ್ಥಿಗಳು ಗೈರಾಗಿದ್ದರು.
ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆಗಳು ನಡೆದಿದ್ದು ಯಾವುದೇ ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4